ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯೋತ್ಸವ ಆಚರಣೆ - Karavali Times ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯೋತ್ಸವ ಆಚರಣೆ - Karavali Times

728x90

1 November 2025

ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯೋತ್ಸವ ಆಚರಣೆ

 ಬಂಟ್ವಾಳ, ನವೆಂಬರ್ 01, 2025 (ಕರಾವಳಿ ಟೈಮ್ಸ್) : ಕನ್ನಡದ ಆಸಕ್ತಿ ಕಡಿಮೆಯಾಗುತ್ತಿದೆ. ಹೆಚ್ಚು ಹೆಚ್ಚು ಮಂದಿ ಆಂಗ್ಲ ಭಾಷೆಯತ್ತ ವಾಲುತ್ತಾ ಇದ್ದು ಕನ್ನಡದ ಬಗ್ಗೆ ಕಾಳಜಿ ತೋರಿಸದೇ ಇರುವುದು ಖೇದಕರ ಸಂಗತಿ. ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ನಾವೆಲ್ಲರೂ ಪಣತೊಡಬೇಕಾಗಿದೆ ಎಂದು ಪತ್ರಕರ್ತ ಸಲೀಂ ಬೋಳಂಗಡಿ ಹೇಳಿದರು.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬಿ ಸಿ ರೋಡಿನ ಕನ್ನಡ ಭವನದ ಆವರಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನ್ಯಾಯವಾದಿ ರವೀಂದ್ರ ಕುಕ್ಕಾಜೆ ಮಾತನಾಡಿ ಕನ್ನಡ ಭಾಷೆ, ನೆಲ ಜಲ, ಕನ್ನಡದ ಸಂಸ್ಕೃತಿಯ ಉಳಿವಿಗಾಗಿ ಕನ್ನಡಿಗರಾದ ನಾವು ಕರ್ತವ್ಯವನ್ನು ನಿರ್ವಹಿಸಬೇಕಾಗುತ್ತದೆ ಎಂದರು, 

ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ  ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿ ಕೋಶಾಧಿಕಾರಿ ಶಿವಶಂಕರ್ ಎನ್ ಕನ್ನಡ ಧ್ವಜಾರೋಹಣಗೈದರು. 

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸದಸ್ಯ ಪೂವಪ್ಪ ನೇರಳಕಟ್ಟೆ, ಪರಿಷತ್ ಗೌರವ ಕಾನೂನು ಸಲಹೆಗಾರ, ನ್ಯಾಯವಾದಿ ಉಮೇಶ ಕುಮಾರ್ ವೈ, ಪರಿಷತ್ ಸಂಘಟನಾ ಕಾರ್ಯದರ್ಶಿ ಜಯರಾಮ ಪಡ್ರೆ, ಪಾಣೆಮಂಗಳೂರು ಹೋಬಳಿ ಕಸಾಪ ಅಧ್ಯಕ್ಷ ಮುಹಮ್ಮದ್ ಪಾಣೆಮಂಗಳೂರು, ಲಯನ್ ಸತ್ಯನಾರಾಯಣ ರಾವ್ ಮೊದಲಾದವರು ಭಾಗವಹಿಸಿದ್ದರು. ಕಸಾಪ ಗೌರವ ಕಾರ್ಯದರ್ಶಿ ವಿ ಎಸ್ ಭಟ್ ಸ್ವಾಗತಿಸಿ, ತುಂಬೆ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್ ಜೆ ನಾಯಕ್ ಕೆ ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top