ಕಾವಳಕಟ್ಟೆ : ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು - Karavali Times ಕಾವಳಕಟ್ಟೆ : ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು - Karavali Times

728x90

19 November 2025

ಕಾವಳಕಟ್ಟೆ : ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ, ನವೆಂಬರ್ 19, 2025 (ಕರಾವಳಿ ಟೈಮ್ಸ್) : ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಎಂಬಲ್ಲಿ ಬುಧವಾರ ಅಪರಾಹ್ನ ಸಂಭವಿಸಿದೆ. 

ಮೃತ ವಿದ್ಯಾರ್ಥಿನಿಯನ್ನು ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಹಾಗೂ ಗಾಯಗೊಂಡ ಸಹಸವಾರೆಯನ್ನು ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂದು ಹೆಸರಿಸಲಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು  ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಾವಳಕಟ್ಟೆ : ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು Rating: 5 Reviewed By: karavali Times
Scroll to Top