ಬಂಟ್ವಾಳ, ಡಿಸೆಂಬರ್ 01, 2025 (ಕರಾವಳಿ ಟೈಮ್ಸ್) : ಅಕ್ರಮ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ಭಾನುವಾರ ನಡೆದಿದೆ. ದಾಳಿ ವೇಳೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇತರರು ಪರಾರಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಇಡ್ಕಿದು ನಿವಾಸಿ ಉಮೇಶ (38), ಅನಂತಾಡಿ ನಿವಾಸಿ ಅಣ್ಣು (38) ಹಾಗೂ ವೀರಕಂಭ ನಿವಾಸಿ ಉಮೇಶ್ (30) ಎಂದು ಹೆಸರಿಸಲಾಗಿದೆ.
ಪಾತ್ರತೋಟ ಎಂಬಲ್ಲಿನ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪಿಎಸ್ಸೈ ಬಿ ಎಸ್ ನಾಯಕ್ ಅವರ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ.
ದಾಳಿ ವೇಳೆ ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ್ದ 2,100/- ರೂಪಾಯಿ ನಗದು ಹಣ, 5 ಕೋಳಿಗಳು, ಕತ್ತಿ, ದಾರ ಮೊದಲಾದ ಸೊತ್ತುಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment