ಬಂಟ್ವಾಳ, ನವೆಂಬರ್ 03, 2025 (ಕರಾವಳಿ ಟೈಮ್ಸ್) : ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಕೊಲ್ಪದಬೈಲು ಎಂಬಲ್ಲಿ ನ 1 ರಂದು ರಾತ್ರಿ ವೇಳೆ ಸಂಭವಿಸಿದೆ.
ಗಾಯಗೊಂಡವರನ್ನು ಮಾಲಾಡಿ ಗ್ರಾಮದ ಜನತಾ ಕಾಲೊನಿ ನಿವಾಸಿ ಕಿಶೋರ್ ಎಂದು ಹೆಸರಿಸಲಾಗಿದೆ. ಇವರು ನ 1 ರಂದು ರಾತ್ರಿ 8.50 ರ ವೇಳೆಗೆ ಕೊಲ್ಪೆದಬೈಲು ಎಂಬಲ್ಲಿ ತಮ್ಮ ಮನೆಗೆ ಹೋಗಲು ಸಂಬಂಧಿಕ ಯುತೇಶ ಜೊತೆ ಹೆದ್ದಾರಿ ದಾಟಲು ನಿಂತಿದ್ದ ವೇಳೆ ಮಡಂತ್ಯಾರು ಕಡೆಯಿಂದ ಬೆಳ್ತಂಗಡಿ ಕಡೆಗೆ ಮುಸ್ತಫಾ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಕಿಶೋರ್ ಅವರಿಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಯುತೇಶ್ ಅವರು ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












0 comments:
Post a Comment