ಮಂಗಳೂರು, ನವೆಂಬರ್ 25, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಗರದ ಕದ್ರಿ ಜಿಲ್ಲಾ ಬಾಲಭವನದಲ್ಲಿ ನವೆಂಬರ್ 25 ರಂದು ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಮಾತನಾಡಿ, ಕಾರ್ಯಕ್ರಮದ ಭಾಗೀದಾರರೆಲ್ಲರೂ ದೌರ್ಜನ್ಯಕ್ಕೊಳಗಾದ ಮಹಿಳೆಯರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪಾತ್ರವಹಿಸುವವರು. ಆದುದರಿಂದ ಸರ್ಕಾರದ ಕಾನೂನುಗಳ ಹಾಗೂ ಯೋಜನೆಗಳ ಅರಿವು ಇರುವುದು ಹಾಗೂ ಸೇವೆಗಳನ್ನು ಒದಗಿಸುವುದು ಬಹುಮುಖ್ಯ. ಯಾವುದೇ ಮಹಿಳೆ ದೌರ್ಜನ್ಯಕ್ಕೊಳಗಾದಲ್ಲಿ ನೇರವಾಗಿ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಬಂದು ದೂರು ನೀಡಿ ಪರಿಹಾರ ಪಡೆದುಕೊಳ್ಳಬಹು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಮಾತನಾಡಿ, ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ ತಡೆಗಾಗಿ ಹಲವಾರು ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ ಹೀಗೆ ಹಲವಾರು ಸಂಘ-ಸಂಸ್ಥೆಗಳು, ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪ್ಯಾನಲ್ ವಕೀಲ ಶುಕರಾಜ್ ಕೊಟ್ಟಾರಿ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮನಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಅರಿಣಾ ಯಡಿಯಾಳ್, ಮಂಗಳೂರು (ಗ್ರಾ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಕಾರಿಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಸಖಿ ಒನ್ ಸ್ಟಾಫ್ ಸೆಂಟರ್, ಶಕ್ತಿ ಸದನ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ದತ್ತು ಕೇಂದ್ರ, ಬಾಲಕರ ಬಾಲ ಮಂದಿರ, ಬಾಲಕಿಯರ ಬಾಲ ಮಂದಿರ, ಸಾಂತ್ವನ ಕೇಂದ್ರ, ಉದ್ಯೋಗಸ್ಥ ಮಹಿಳಾ ವಸತಿ ನಿಲಯ, ಕೌಟುಂಬಿಕ ಸಲಹಾ ಕೇಂದ್ರ ಹಾಗೂ ಜಿಲ್ಲಾ ಬಾಲಭವನದ ಅಧಿಕಾರಿ/ ಸಿಬ್ಬಂದಿಗಳು ಭಾಗವಹಿಸಿದ್ದರು.














0 comments:
Post a Comment