ಮಂಗಳೂರು, ನವೆಂಬರ್ 27, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೊರಗುತ್ತಿಗೆ ನೌಕರರೋರ್ವರ ಬಾಕಿ ಇರುವ ಸಂಬಳದ ಬಿಲ್ ಮಾಡಿಕೊಡಲು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿ ಮುಂದುವರಿಸಲು ನೇಮಕಾತಿ ಆದೇಶ ಮಾಡಿಸಿಕೊಡಲು ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇಯರ್ ಕೃಷ್ಣಮೂರ್ತಿ 50 ಸಾವಿರ ಮಂಗಳೂರು ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕ ಬಿ ಕೆ ರಾಜು ಅವರು 10 ಸಾವಿರ ಹಾಗೂ ಮಂಗಳೂರು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸೂಪರ್ ವೈಸರ್ ಎಸ್ ಧನಶೇಖರ ಅವರು 10 ಸಾವಿರ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಂಗಳೂರು ಲೋಕಾಯುಕ್ತ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ನವೆಂಬರ್ 27 ರಂದು ಗುರುವಾರ ಕೃಷ್ಣಮೂರ್ತಿ ಅವರು 20 ಸಾವಿರ ರೂಪಾಯಿ, ಬಿ.ಕೆ. ರಾಜು ಅವರು 5 ಸಾವಿರ ರೂಪಾಯಿ ಹಾಗೂ ಎಸ್ ಧನಶೇಖರ 5 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೆÇಲೀಸರ ಬಲೆಗೆ ಬಿದ್ದಿರುತ್ತಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪ್ರಭಾರ ಎಸ್ಪಿ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಡಿವೈಎಸ್ಪಿಗಳಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ., ಲೋಕಾಯುಕ್ತ ಪೆÇಲೀಸ್ ಇನ್ಸ್ ಪೆಕ್ಟರ್ ಗಳಾದ ಶ್ರೀಮತಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್., ರವಿ ಪವಾರ್, ರಾಜೇಂದ್ರ ನಾಯ್ಡ್ ಎಂ.ಎನ್ ಅವರು ಸಿಬ್ಬಂದಿಗಳ ಜೊತೆ ಭಾಗವಹಿಸಿದ್ದರು.
















0 comments:
Post a Comment