ಬಾಡಿಗೆ ಕೋಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣ ಬೇಧಿಸಿದ ಪುತ್ತೂರು ನಗರ ಪೊಲೀಸರು : ಆರೋಪಿ ಅರೆಸ್ಟ್ - Karavali Times ಬಾಡಿಗೆ ಕೋಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣ ಬೇಧಿಸಿದ ಪುತ್ತೂರು ನಗರ ಪೊಲೀಸರು : ಆರೋಪಿ ಅರೆಸ್ಟ್ - Karavali Times

728x90

20 November 2025

ಬಾಡಿಗೆ ಕೋಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣ ಬೇಧಿಸಿದ ಪುತ್ತೂರು ನಗರ ಪೊಲೀಸರು : ಆರೋಪಿ ಅರೆಸ್ಟ್

ಪುತ್ತೂರು, ನವೆಂಬರ್ 20, 2025 (ಕರಾವಳಿ ಟೈಮ್ಸ್) : ಬಾಡಿಗೆ ಕೋಣೆಯಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಕೆಮ್ಮಿಂಜೆ ಗ್ರಾಮದ ಕಮ್ಮಾಡಿ ಮರದ ಮಿಲ್ ಬಳಿ ನ 15 ರಂದು ನಡೆದಿದೆ. 

ಬಂಧಿತ ಆರೋಪಿಯನ್ನು ಕಬಕ ನಿವಾಸಿ ಮುಹಮ್ಮದ್ ಮುಸ್ತಫಾ (36) ಎಂದು ಹೆಸರಿಸಲಾಗಿದೆ. ಈತ ಕೆಮ್ಮಿಂಜೆ  ಗ್ರಾಮದ, ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ಅಕ್ರಮವಾಗಿ ನಿಷೇದಿತ ಮನೋನ್ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣಾ ಪಿಎಸ್ಸೈ ಜನಾರ್ಧನ ಕೆ ಎಂ ಅವರ ನೇತೃತ್ವದ ಪೊಲೀಸರು ದಾಳಿ ನಡೆಸಿ ಪ್ರಕರಣ ಬೇಧಿಸಿದ್ದಾರೆ. 

ದಾಳಿ ವೇಳೆ ಬಾಡಿಗೆ ಕೋಣೆಯಲ್ಲಿ ಆರೋಪಿಯು ಅಕ್ರಮವಾಗಿ 14 ಗ್ರಾಂ ನಿಷೇದಿತ ಮಾದಕ ಮನೋನ್ಮಾದಕ ವಸ್ತು ಎಂಡಿಎಂಎ ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿ ಮಹಮ್ಮದ್ ಮುಸ್ತಪಾ ವಿರುದ್ಧ ಈಗಾಗಲೇ ಪುತ್ತೂರು ನಗರ ಠಾಣೆಯಲ್ಲಿ ಪೆÇೀಕ್ಸೊ ಪ್ರಕರಣ ದಾಖಲಾಗಿ, ಸದ್ರಿ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 48/2024, 108/2024ರಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಾಡಿಗೆ ಕೋಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣ ಬೇಧಿಸಿದ ಪುತ್ತೂರು ನಗರ ಪೊಲೀಸರು : ಆರೋಪಿ ಅರೆಸ್ಟ್ Rating: 5 Reviewed By: karavali Times
Scroll to Top