ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಇಬ್ಬರು ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ - Karavali Times ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಇಬ್ಬರು ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ - Karavali Times

728x90

7 November 2025

ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಇಬ್ಬರು ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ

ಮಂಗಳೂರು, ನವೆಂಬರ್ 08, 2025 (ಕರಾವಳಿ ಟೈಮ್ಸ್) : ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ 

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೆÇಲೀಸರು ದಸ್ತಗಿರಿ ಮಾಡಿ ಅವರಿಂದ 24.57 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಂಡಿರುತ್ತಾರೆ. 

ನ 4 ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಆಟೋ ಚಾಲಕ, ಅಡ್ಯಾರ್-ಕಣ್ಣೂರು ದಯಂಬು ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ ಅಬ್ದುಲ್ ಸಲಾಂ (39) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನಿಂದ 1.20 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೆÇೀನ್, ತೂಕ ಮಾಪನ, ಖಾಲಿ ಜಿಪ್ ಲಾಕ್ ಕವರ್ ಸಹಿತ ಒಟ್ಟು 2,30,500/- ರೂಪಾಯಿ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನ 6 ರಂದು ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು, ಉಳ್ಳಾಲ ತಾಲೂಕಿನ, ಬೋಳಿಯಾರು-ಜಾರದಗುಡ್ಡೆ ನಿವಾಸಿ ದಿವಂಗತ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಮೊಹಮ್ಮದ್ ನಾಸೀರ್ ಅಲಿಯಾಸ್ ಶಾಕೀರ್ ಅಲಿಯಾಸ್ ಚಾಕಿ (28) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ 1.20 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ಕಪ್ಪು ಬಣ್ಣದ ಯಮಹಾ ಕಂಪೆನಿಯ ಯಮಹಾ ಎಫ್ ಝಡ್ ಬೈಕ್, ಮೊಬೈಲ್ ಪೆÇೀನ್, ಖಾಲಿ ಜಿಪ್ ಲಾಕ್ ಕವರ್ ಸಹಿತ ಒಟ್ಟು 2.05 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಮಾದಕವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

  • Blogger Comments
  • Facebook Comments

0 comments:

Post a Comment

Item Reviewed: ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಇಬ್ಬರು ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top