ಮಂಗಳೂರು-ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಭೇಟಿ : ಗಡಿ ಜಿಲ್ಲೆಗಳ ಅಪರಾಧ ಚಟುವಟಿಕೆಗಳ ಬಗ್ಗೆ ಚರ್ಚೆ - Karavali Times ಮಂಗಳೂರು-ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಭೇಟಿ : ಗಡಿ ಜಿಲ್ಲೆಗಳ ಅಪರಾಧ ಚಟುವಟಿಕೆಗಳ ಬಗ್ಗೆ ಚರ್ಚೆ - Karavali Times

728x90

23 November 2025

ಮಂಗಳೂರು-ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಭೇಟಿ : ಗಡಿ ಜಿಲ್ಲೆಗಳ ಅಪರಾಧ ಚಟುವಟಿಕೆಗಳ ಬಗ್ಗೆ ಚರ್ಚೆ

ಮಂಗಳೂರು, ನವೆಂಬರ್ 24, 2025 (ಕರಾವಳಿ ಟೈಮ್ಸ್) : ಕೇರಳ ರಾಜ್ಯದ ಕಣ್ಣೂರು ವಲಯದ ಡಿಐಜಿಪಿ  ಯತೀಶ್ಚಂದ್ರ ಜಿ.ಎಚ್, ಕಾಸರಗೋಡು ಜಿಲ್ಲಾ ಎಸ್ಪಿ ವಿಜಯ ಭರತ್ ರೆಡ್ಡಿ ಅವರು ನ 22 ರಂದು ಮಂಗಳೂರು ನಗರ ಕಮಿಷನರೇಟ್ ಕಛೇರಿಗೆ ಆಗಮಿಸಿ, ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್. ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ನಗರ ಕಮಿಷನರೇಟ್ ಮತ್ತು ದ.ಕ. ಜಿಲ್ಲಾ ಪೆÇಲೀಸ್ ಅಧಿಕಾರಿಗಳೊಂದಿಗೆ ನಡೆದ ಬಾರ್ಡರ್ ಕ್ರೈಂ ಮೀಟೀಂಗಿನಲ್ಲಿ ಭಾಗವಹಿಸಿದರು. 

ಈ ವೇಳೆ ಉಭಯ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ನಡೆಯುವ ಅಪರಾಧ ಪ್ರಕರಣಗಳ ಮಾಹಿತಿ ವಿನಿಮಯ ಮಾಡಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳು, ವಾರಂಟ್ ಅಸಾಮಿಗಳು, ಅಂತರ್ ರಾಜ್ಯ ಅಪರಾಧ ಪ್ರಕರಣಗಳು, ಮಾದಕದ್ರವ್ಯ ಸಾಗಾಟ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಎರಡೂ ರಾಜ್ಯಗಳಲ್ಲಿ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಗಡಿ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಮತ್ತು ವಾರಂಟ್ ಅಸಾಮಿಗಳ ಮಾಹಿತಿ ವಿನಿಮಯ ಮತ್ತು ಪತ್ತೆಯ ಬಗ್ಗೆ ಕಾರ್ಯಯೋಜನೆಯನ್ನು ರೂಪಿಸಲಾಗಿದ್ದು, ಅಪರಾಧ ಪ್ರಕರಣಗಳ ನಿಯಂತ್ರಣ ಮತ್ತು ಪತ್ತೆ ಕಾರ್ಯದಲ್ಲಿ ಪರಸ್ಪರ ಸಹಕಾರ, ಜಂಟಿ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿ, ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು-ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಭೇಟಿ : ಗಡಿ ಜಿಲ್ಲೆಗಳ ಅಪರಾಧ ಚಟುವಟಿಕೆಗಳ ಬಗ್ಗೆ ಚರ್ಚೆ Rating: 5 Reviewed By: karavali Times
Scroll to Top