ಬಾಲ್ಯ ವಿವಾಹ, ಪೋಕ್ಸೋ ಪ್ರಕರಣ ಸಂದರ್ಭ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು : ತಹಶೀಲ್ದಾರ್ ರಮೇಶ್ ಬಾಬು ಸೂಚನೆ - Karavali Times ಬಾಲ್ಯ ವಿವಾಹ, ಪೋಕ್ಸೋ ಪ್ರಕರಣ ಸಂದರ್ಭ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು : ತಹಶೀಲ್ದಾರ್ ರಮೇಶ್ ಬಾಬು ಸೂಚನೆ - Karavali Times

728x90

21 November 2025

ಬಾಲ್ಯ ವಿವಾಹ, ಪೋಕ್ಸೋ ಪ್ರಕರಣ ಸಂದರ್ಭ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು : ತಹಶೀಲ್ದಾರ್ ರಮೇಶ್ ಬಾಬು ಸೂಚನೆ

ಮಂಗಳೂರು, ನವೆಂಬರ್ 21, 2025 (ಕರಾವಳಿ ಟೈಮ್ಸ್) : ಬಾಲ್ಯವಿವಾಹ ಮತ್ತು ಪೆÇಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಪೆÇಲೀಸ್ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು  ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಸೂಚಿಸಿದ್ದಾರೆ.

ಶುಕ್ರವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ  ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಬೇಟಿ ಬಚಾವೋ, ಬೇಟಿ ಪಡಾವೋ, ಪೆÇಕ್ಸೋ, ಬಾಲ್ಯ ವಿವಾಹ, ಮಕ್ಕಳ ನಾಪತ್ತೆ ಸೇರಿದಂತೆ ಇತರೆ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮಹರಿಸಿ ಕೆಲಸ ನಿರ್ವಹಿಸಬೇಕು ಎಂದರು. 

ಮಾದಕ ಮತ್ತು ವ್ಯಸನ ನಿಷೇಧ ಯೋಜನೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಸಮಿತಿ, ಭಾಗ್ಯಲಕ್ಷ್ಮಿ ಯೋಜನೆಯ ಕಾರ್ಯಪಡೆ ಸಮಿತಿ, ಅಂಗವಿಕಲ ಕುಂದು ಕೊರತೆ ನಿವಾರಣೆ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟ ತಡೆ ಸಮಿತಿ, ಬಾಲ್ಯ ವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿ, ಬೇಟಿ ಬಚಾವೋ ಬೇಟಿ ಪಡಾವೋ ಸಮಿತಿ, ಮಾತೃ ವಂದನಾ ಯೋಜನೆ ಸಮಿತಿಯ ಪ್ರಗತಿಯನ್ನು ಪರಿಶೀಲಿಸಿದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯಡಿ ಎಪ್ರಿಲ್-2025 ರಿಂದ ಅಕ್ಟೋಬರ್ 2025 ರವರೆಗೆ  16 ಪ್ರಕರಣಗಳು ದಾಖಲಾಗಿರುತ್ತದೆ. ಮಂಗಳೂರು ಶಿಶು ಅಭಿವೃದ್ಧಿ ಯೋಜನ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ತಾಯಂದಿರ ಸಭೆ ಹಾಗೂ ಸ್ತ್ರೀ ಶಕ್ತಿ ಸಭೆಗಳಲ್ಲಿ ಸೇರಿದ ಮಹಿಳೆಯರು ಹಾಗೂ ಸೇರಿದ ಜನರಿಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧದ ಬಗ್ಗೆ  ತಿಳಿಸಲಾಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಒಟ್ಟು 9,270 ಯುಡಿಐಡಿ ಚೀಟಿ ವಿಕಲಚೇತನರ ಫಲಾನುಭವಿಗಳಿಗೆ ನೀಡಲಾಗಿರುತ್ತದೆ. 2025-26ನೇ ಸಾಲಿನಲ್ಲಿ ಸಾಧನ ಸಲಕರಣೆಗಳಿಗೆ ಆನ್‍ಲೈನ್ ಅರ್ಜಿ ಸಲ್ಲಿಸಲಾಗಿದ್ದು, ಪ್ರಗತಿ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಪೆÇಲೀಸ್ ಇನ್ಸ್ ಪೆಕ್ಟರ್ ಗುರುರಾಜ್, ಮಂಗಳೂರು (ಗ್ರಾಮಾಂತರ) ಶಿಶು ಅಭಿವೃದ್ಧಿ  ಯೋಜನಾಧಿಕಾರಿ ಶೈಲಾ ಕೆ ಕಾರಗಿ ಹಾಗೂ   ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಾಲ್ಯ ವಿವಾಹ, ಪೋಕ್ಸೋ ಪ್ರಕರಣ ಸಂದರ್ಭ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು : ತಹಶೀಲ್ದಾರ್ ರಮೇಶ್ ಬಾಬು ಸೂಚನೆ Rating: 5 Reviewed By: karavali Times
Scroll to Top