ಮಂಗಳೂರು, ನವೆಂಬರ್ 09, 2025 (ಕರಾವಳಿ ಟೈಮ್ಸ್) : ಮಹಾನಗರ ಪಾಲಿಕೆ ವ್ಯಾಪ್ತಿಯ 58ನೇ ಬೋಳಾರ ವಾರ್ಡಿನ ಮುಳಿಹಿತ್ಲುವಿನಲ್ಲಿ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಗಲೀಕರಣದ ಅವಶ್ಯಕತೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರು, ಸಾರ್ವಜನಿಕರು, ಹಲವು ಸಮಯದಿಂದ ಬೇಡಿಕೆಯಿಟ್ಟಿದ್ದರು. ಆ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಪಾಲಿಕೆಯ ಪ್ರೀಮಿಯಂ ಎಫ್.ಎ.ಆರ್ ಅನುದಾನವನ್ನು ಬಳಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದ್ದೇನೆ ಎಂದರು.
ಮಾಜಿ ಉಪ ಮೇಯರ್ ಭಾನುಮತಿ ಪಿ.ಎಸ್, ನಿಕಟಪೂರ್ವ ಪಾಲಿಕೆ ಸದಸ್ಯೆ ರೇವತಿ ಶೆಟ್ಟಿ, ಸ್ಥಳೀಯ ಬಿಜೆಪಿ ಪ್ರಮುಖರಾದ ದೀಪಕ್ ಪೈ, ಅಮಿತ್ ಶೆಟ್ಟಿ, ಪ್ರಸಾದ್ ಬೋಳಾರ, ಉಮಾನಾಥ ಕೋಟೆಕಾರ್, ಗಿರೀಶ್ ಶೆಟ್ಟಿ, ದಿನೇಶ್ ಶೆಟ್ಟಿ, ಕೇಶವ ಶೆಟ್ಟಿ, ಸುಜಾತ ಆಳ್ವ, ಜಯಶ್ರೀ, ಶಬರಿ ಶೆಟ್ಟಿ, ಜಯಶ್ರೀ ಕೊಟ್ಟಾರಿ, ಗಾಯತ್ರಿ, ವಿವೇಕ್ ಶೆಟ್ಟಿ ಮೊದಲಾದವರು ಈ ಸಂದರ್ಭ ಜೊತೆಗಿದ್ದರು.
















0 comments:
Post a Comment