ಪುತ್ತೂರು, ನವೆಂಬರ್ 08, 2025 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರನ್ನು ಪುತ್ತೂರು ನಗರ ಪೊಲೀಸರು ನ 5 ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪುತ್ತೂರು ತಾಲೂಕು, ನೆಕ್ಕಿಲಾಡಿ ಗ್ರಾಮದ ನಿವಾಸಿಗಳಾದ ಮುಬಾರಕ್ (21), ಅಬ್ದುಲ್ ಅನಾಸ್ (21), ಕಬಕ ಗ್ರಾಮದ ನಿವಾಸಿ ಉಮ್ಮರ್ ಫಾರೂಕ್ (41) ಹಾಗೂ ಬಂಟ್ವಾಳ ತಾಲೂಕು, ಬಿಳಿಯೂರು ಗ್ರಾಮದ ಹಿತೇಶ್ (21) ಎಂದು ಹೆಸರಿಸಲಾಗಿದೆ.
ನ 5 ರಂದು ಸಂಜೆ ಪುತ್ತೂರು ನಗರ ಪೊಲೀಸ್ ಠಾಣಾ ಪಿಎಸ್ಸೈ ಆಂಜನೇಯ ರೆಡ್ಡಿ ಜಿ ವಿ ಅವರು ಸಿಬ್ಬಂದಿಗಳ ಜೊತೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಪುತ್ತೂರು ತಾಲೂಕು ಕಬಕ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ನಾಲ್ವರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಸ್ಥಳಕ್ಕೆ ಹೋಗಿ ನೋಡಲಾಗಿ ಸಾರ್ವಜನಿಕ ಸ್ಥಳದಲ್ಲಿದ್ದ ನಾಲ್ವರು ವ್ಯಕ್ತಿಗಳನ್ನು ತಡೆದು ವಿಚಾರಿಸಿದಾಗ ಅವರುಗಳು ಯಾವುದೋ ಮಾದಕ ವಸ್ತು ಸೇವಿಸಿದವನಂತೆ ಕಂಡುಬಂದಿರುತ್ತಾರೆ. ಅವರನ್ನು ವಿಚಾರಿಸಲಾಗಿ ಅವರು ಮಾದಕ ದ್ರವ್ಯ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನಿಷೇದಿತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ನಾಲ್ವರು ಆರೋಪಿಗಳ ವಿರುದ್ಧ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.















0 comments:
Post a Comment