ಮಾದಕ ವಸ್ತು ಸೇವನೆ, ಮಾರಾಟ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ - Karavali Times ಮಾದಕ ವಸ್ತು ಸೇವನೆ, ಮಾರಾಟ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ - Karavali Times

728x90

20 November 2025

ಮಾದಕ ವಸ್ತು ಸೇವನೆ, ಮಾರಾಟ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ

ಪುತ್ತೂರು, ನವೆಂಬರ್ 20, 2025 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣದಲ್ಲಿ ಆರೋಪಿಗಳಾದ ಸಲೀಂ ಹುಸೇನ್, ಶಹಜ್ ಅಹಮದ್, ಮುಹಮ್ಮದ್ ಶಾಫಿ ಎಂಬವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

ಉಪ್ಪಿನಂಗಡಿ ಠಾಣಾ ಪಿಎಸ್ಸೈ ರಾಜೇಶ್ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಪ್ರಕರಣದ ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಬೆಳ್ತಂಗಡಿ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿಗಳ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ, ಕಲಂ 27(ಬಿ) ಅಡಿಯಲ್ಲಿ 10 ಸಾವಿರ ರೂಪಾಯಿ ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ, ಕಲಂ 20(ಬಿ)(2)(ಎ) ಅಡಿಯಲ್ಲಿ 10 ಸಾವಿರ ರೂಪಾಯಿ ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿದೆ. ಸರಕಾರದ ಪರವಾಗಿ ಸಹಾಯಕ ಅಭಿಯೋಜಕ ದಿವ್ಯರಾಜ ಹೆಗ್ಡೆ ಅವರು ವಾದ ಮಂಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಾದಕ ವಸ್ತು ಸೇವನೆ, ಮಾರಾಟ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ Rating: 5 Reviewed By: karavali Times
Scroll to Top