ಬಂಟ್ವಾಳ, ನವೆಂಬರ್ 11, 2025 (ಕರಾವಳಿ ಟೈಮ್ಸ್) : ಶಿಕ್ಷಣ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಉತ್ಕøಷ್ಟ ಸಾಧನ. ಆ ಕಾರಣದಿಂದ ಯಾವುದೇ ವ್ಯಕ್ತಿ ಶಿಕ್ಷಣದಿಂದ ವಂಚಿತವಾಗಬಾರದು. ಸಮಾಜವು ಬಲಿಷ್ಠ ಹಾಗೂ ಪ್ರಗತಿಪರವಾಗಬೇಕಾದಲ್ಲಿ ವಿದ್ಯೆಯು ಪ್ರಮುಖವಾದುದು ಎಂದು ಬಂಟ್ವಾಳ ಎಸ್ ವಿ ಎಸ್ ಕಾಲೇಜು ಪ್ರಾಂಶುಪಾಲ ಎಂ ಡಿ ಮಂಚಿ ಹೇಳಿದರು.
ಕಾಲೇಜಿನ ಐಕ್ಯುಎಸಿ, ಎನ್ನೆಸ್ಸೆಸ್ ಹಾಗೂ ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಗಳÀ ಸಂಯುಕ್ತಾಶ್ರಯದಲ್ಲಿ ಭಾರತದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರೀಯ ಶಿಕ್ಷಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ ಕಾಶೀನಾಥ ಶಾಸ್ತ್ರಿ ಎಚ್ ವಿ ಸ್ವಾಗತಿಸಿ, ಅಮಿತ್ ಎಸ್ ಭಟ್ ವಂದಿಸಿದರು. ಪ್ರಸ್ತಾವನೆಗೈದರು. ವೀಕ್ಷಿತ ಗಟ್ಟಿ ಟಿ ಕಾರ್ಯಕ್ರಮ ನಿರೂಪಿಸಿದರು.















0 comments:
Post a Comment