ಮಂಗಳೂರು, ನವೆಂಬರ್ 28, 2025 (ಕರಾವಳಿ ಟೈಮ್ಸ್) : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಈ ಸಂದರ್ಭ ಶಾಸಕರಾದ ಯು ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಮಂಗಳೂರು ಪೆÇಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಮೊದಲಾದವರು ಜೊತೆಗಿದ್ದರು. ಬಳಿಕ ಪ್ರಧಾನಮಂತ್ರಿಗಳು, ವಾಯುಪಡೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.























0 comments:
Post a Comment