ಬಂಟ್ವಾಳ, ನವೆಂಬರ್ 24, 2025 (ಕರಾವಳಿ ಟೈಮ್ಸ್) : ಸ್ಪರ್ಧೆ ಎನ್ನುವುದು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರುವ ಮಾಧ್ಯಮ. ಪ್ರಶಸ್ತಿಗಳನ್ನು ಗಮನದಲ್ಲಿಟ್ಟುಕೊಳ್ಳದೇ ಎಲ್ಲಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ದೊರಕಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಂಟ್ವಾಳ ಎಸ್ ವಿ ಎಸ್ ಕಾಲೇಜು ಪ್ರಾಂಶುಪಾಲ ಎಂ ಡಿ ಮಂಚಿ ಕರೆ ನೀಡಿದರು.
ಎಸ್ ವಿ ಎಸ್ ಪದವಿ ಮತ್ತು ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ವಿವಿಧ ಶೈಕ್ಷಣಿಕ ಸ್ಪರ್ಧೆಗಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್ ವಿ ಎಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ ಸ್ವಾಗತಿಸಿ, ಬಿಸಿಎ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಹನಾ ವಂದಿಸಿದರು. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿ, ರಾಲ್ವಿನ್ ಲಾಯ್ಡ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ಡಾ ವಿನಾಯಕ ಕೆ ಎಸ್ ಹಾಗೂ ಶ್ರೀಮತಿ ಭವಿತಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿಕೊಟ್ಟರು.














0 comments:
Post a Comment