ಬಂಟ್ವಾಳ, ನವೆಂಬರ್ 28, 2025 (ಕರಾವಳಿ ಟೈಮ್ಸ್) : ವಿದ್ಯಾರ್ಥಿಗಳು ಯೋಜನಾ ಬದ್ಧವಾಗಿ ಅಧ್ಯಯನ ಮಾಡಿದರೆ ತಮ್ಮ ಪಠ್ಯದೊಂದಿಗೆ ಸಂಗೀತ, ಅಭಿನಯ, ಕ್ರೀಡೆ ಇತ್ಯಾದಿ ವಿವಿಧ ಕಲೆಗಳಲ್ಲಿಯೂ ಮುಂದುವರೆಯುವುದು ಸಾಧ್ಯವಾಗುತ್ತದೆ. ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳು ಹೆಚ್ಚುತ್ತಿದ್ದು ಇದಕ್ಕೆ ಪೋಷಕರೂ ಒಂದು ರೀತಿಯಲ್ಲಿ ಕಾರಣರಾಗುತ್ತಿದ್ದಾರೆ ಎಂದು ನಿವೃತ್ತ ಗಣಿತ ಶಾಸ್ತ್ರ ಪ್ರಾಧ್ಯಾಪಕ ಪ್ರೊ ಟಿ ಪ್ರಕಾಶ್ ಪ್ರಭು ನುಡಿದರು.
ಬಂಟ್ವಾಳ-ವಿದ್ಯಾಗಿರಿಯ ಎಸ್ ವಿ ಎಸ್ ಇಂಗ್ಲೀಷ್ ಮೀಡಿಯಂ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲಿ ಓದಿನಲ್ಲಿ ಮುಂದಿರುವ ಕೆಲವು ವಿದ್ಯಾರ್ಥಿಗಳು ಉನ್ನತ ಅಧ್ಯಯನದ ಸಂದರ್ಭಗಳಲ್ಲಿ ಹಿಂದುಳಿಯುತ್ತಿದ್ದಾರೆ. ಅದಕ್ಕೆ ಅವರಲ್ಲಿ ತಾರ್ಕಿಕ ಜ್ಞಾನದ ಕೊರತೆ ಕಡಿಮೆಯಾಗುತ್ತಿರುವುದೇ ಕಾರಣ ಎಂದರು.
ಎಸ್ ವಿ ಎಸ್ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕಿ ಶ್ರೀಮತಿ ಕೆ ರೇಖಾ ಶೆಣೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ನಾಯಕ ತನೀಶ್ ಆರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಹರಿಪ್ರಸಾದ್ ಶಾಲಾ ವಾರ್ಷಿಕ ವರದಿ ವಾಚಿಸಿದರು. ಶ್ರೀಮತಿ ಶರ್ಮಿಳಾ ಅತಿಥಿಗಳನ್ನು ಪರಿಚಯಿಸಿ, ಶ್ರೀಮತಿ ಗೌತಮಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಶೈಕ್ಷಣಿಕ, ಕ್ರೀಡಾ, ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಚೈತ್ರಾ ಶೆಟ್ಟಿ ಸ್ವಾಗತಿಸಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ದೇವಾಡಿಗ ವಂದಿಸಿದರು. ಶಾನ್ ಸಜಿತ್ ಹಾಗೂ ಅನನ್ಯ ಪಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.













0 comments:
Post a Comment