ಬಂಟ್ವಾಳ, ನವೆಂಬರ್ 14, 2025 (ಕರಾವಳಿ ಟೈಮ್ಸ್) : ಸ್ಕೂಟರಿಗೆ ಮಾರುತಿ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ನೆತ್ತರಕೆರೆ ಎಂಬಲ್ಲಿ ನ 12 ರಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರರನ್ನು ಪೆರುವಾಯಿ ನಿವಾಸಿ ರವೀಂದ್ರ ನಾಯ್ಕ ಕೆ (54) ಹಾಗೂ ಸಹಸವಾರ ಸಂಜೀವ ಎಂದು ಹೆಸರಿಸಲಾಗಿದೆ. ಇವರು ಸ್ಕೂಟರಿನಲ್ಲಿ ವಿಟ್ಲ-ಸಾಲೆತ್ತೂರು ರಸ್ತೆಯಲ್ಲಿ ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಹೋಗುತ್ತಾ ಮಧ್ಯಾಹ್ನ ಸುಮಾರು 1 ಗಂಟೆಗೆ ವಿಟ್ಲ ಕಸಬಾ ಗ್ರಾಮದ ನೆತ್ತರಕೆರೆ ಎಂಬಲ್ಲಿಗೆ ತಲುಪಿದಾಗ ಎದುರಿನಿಂದ ಕೊಲಿನ್ ಥೋಮಸ್ ಮಿರಾಂದ ಅವರು ಚಲಾಯಿಸಿಕೊಂಡು ಸಾಲೆತ್ತೂರು ಕಡೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರನ್ನು ಯಾವುದೇ ಸೂಚನೆ ನೀಡದೇ ನಿರ್ಲಕ್ಷ ಹಾಗೂ ದುಡುಕುತನದಿಂದ ಏಕಾಏಕಿ ಬ್ರೇಕ್ ಹಾಕಿ ಎಡಬದಿ ರಸ್ತೆಗೆ ಚಲಾಯಿಸಿ ಸ್ಕೂಟರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸವಾರರಿಬ್ಬರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಸಂಜೀವರನ್ನು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದಂತೆ ಅವರನ್ನು ಪುತ್ತೂರು ಸರಕಾರಿ ಸಾರ್ವಜನಿಕ ಅಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment