ತಲಪಾಡಿ : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರಗೆ ಗಾಯ - Karavali Times ತಲಪಾಡಿ : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರಗೆ ಗಾಯ - Karavali Times

728x90

27 November 2025

ತಲಪಾಡಿ : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರಗೆ ಗಾಯ

ಬಂಟ್ವಾಳ, ನವೆಂಬರ್ 27, 2025 (ಕರಾವಳಿ ಟೈಮ್ಸ್) : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ತಲಪಾಡಿ ಅನುಗ್ರಹ ಶೋ ರೂಂ ಬಳಿ ಬುಧವಾರ ಸಂಭವಿಸಿದೆ. 

ಗಾಯಗೊಂಡ ಸ್ಕೂಟರ್ ಸವಾರನನ್ನು ಅಬ್ದುಲ್ ಜಬ್ಬಾರ್ ಎಂದು ಹೆಸರಿಸಲಾಗಿದೆ. ಜಬ್ಬಾರ್ ತನ್ನ ಸ್ಕೂಟರಿನಲ್ಲಿ ಮಂಗಳೂರು-ಬಿ ಸಿ ರೋಡು ಏಕಮುಖ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಬಿ ಸಿ ರೋಡು ಕಡೆಗೆ ಬರುತ್ತಿದ್ದ ವೇಳೆ ವಿರುದ್ದ ದಿಕ್ಕಿನಲ್ಲಿ ಮುಹಮ್ಮದ್ ಇಕ್ಬಾಲ್ ಎಂಬವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಜಬ್ಬಾರ್ ಅವರಿಗೆ ಗಾಯಗಳಾಗಿವೆ. ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಎಳನೀರು ಮಾರಾಟಗಾರ, ಶಿವಮೊಗ್ಗ ನಿವಾಸಿ ಮುನ್ನ ಅಲಿಯಾಸ್ ಚಂದಪೀರ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತಲಪಾಡಿ : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರಗೆ ಗಾಯ Rating: 5 Reviewed By: karavali Times
Scroll to Top