ಬೆಳ್ತಂಗಡಿ, ನವೆಂಬರ್ 08, 2025 (ಕರಾವಳಿ ಟೈಮ್ಸ್) : ವ್ಯಕ್ತಿಯೋರ್ವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದಲ್ಲಿ ನ 6 ರಂದು ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಅಬ್ದುಲ್ ಬಶೀರ್ (50) ಎಂದು ಹೆಸರಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಸೊಹೈಲ್ (25) ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಇವರು ಅಟೋ ಚಾಲಕ ಕೆಲಸ ಮಾಡಿಕೊಂಡಿದ್ದು, ಇವರು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ತಂದೆ ಹಾಗೂ ಮನೆಯ ಇತರ ಸದಸ್ಯರು ಮಲಗಿದ್ದರು. ನ 6 ರಂದು ಬೆಳಿಗ್ಗೆ ಇವರ ಸಹೋದರ ಮಹಮ್ಮದ್ ಸುಫಿಯಾನ್ ಎಂಬವರು ಶೌಚಾಲಯಕ್ಕೆ ತೆರಳಿದಾಗ, ಶೌಚಾಲಯದ ಬಾಗಿಲಿನ ಚಿಲಕ ಒಳಗಡೆಯಿಂದ ಹಾಕಿದ್ದು, ಕರೆದಾಗ ಯಾವುದೇ ಪ್ರತಿಕ್ರಿಯೆ ಬಾರದಿರುವುದರಿಂದ ಶೌಚಾಲಯದ ಬಾಗಿಲನ್ನು ಬಲವಂತವಾಗಿ ತೆರೆದು ನೋಡಿದಾಗ, ತಂದೆ ನೇಣು ಬಿಗಿದುಕೊಂಡು ನೇತಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಇಳಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಾಗಿದೆ.















0 comments:
Post a Comment