40ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿ ಇತ್ತೆ ಬರ್ಪೆ ಅಬೂಬಬಕ್ಕರ್ ಬಂಧನ : 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ - Karavali Times 40ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿ ಇತ್ತೆ ಬರ್ಪೆ ಅಬೂಬಬಕ್ಕರ್ ಬಂಧನ : 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ - Karavali Times

728x90

17 November 2025

40ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿ ಇತ್ತೆ ಬರ್ಪೆ ಅಬೂಬಬಕ್ಕರ್ ಬಂಧನ : 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ

ವೇಣೂರು, ನವೆಂಬರ್ 17, 2025 (ಕರಾವಳಿ ಟೈಮ್ಸ್) : ವೇಣೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ಅಕ್ಟೋಬರ್ 2 ರಿಂದ 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ವೇಣೂರು ಪೆÇಲೀಸರು ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿ, ಮಂಗಳೂರು-ಜೋಕಟ್ಟೆ ನಿವಾಸಿ ಅಬೂಬಕ್ಕರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕ್ಕರ್ (70) ಎಂಬಾತನನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಆರೋಪಿಯಿಂದ ಸುಮಾರು 5.65 ಲಕ್ಷ ರೂಪಯಿ ಮೌಲ್ಯದ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ 60 ಸಾವಿರ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಶ್ರೀಮತಿ ರೋಹಿಣಿ ಸಿ ಕೆ ಅವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವೃತ್ತ ನಿರೀಕ್ಷಕ ಬಿ.ಜಿ. ಸುಬ್ಬಾಪೂರಮಠ ಅವರ ನೇತೃತ್ವದ ತಂಡ, ವೇಣೂರು ಪೆÇಲೀಸ್ ಠಾಣಾ ಪಿಎಸ್ಸೈ ಗಳಾದ ಅಕ್ಷಯ್ ಡವಗಿ, ಶ್ರೀಮತಿ ಓಮನ ಎನ್. ಹಾಗೂ ಎಎಸ್ಸೈಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಎಚ್.ಸಿ.ಗಳಾದ ಕೃಷ್ಣ, ಪ್ರಶಾಂತ್, ಪಿ.ಸಿ.ಗಳಾದ ಚರಣ್, ಬಸವರಾಜ್, ಮೋಹನ್, ರಜಿತ್, ಮಹಿಳಾ ಪಿಸಿ ಶ್ರೀಮತಿ ಜಯಶ್ರೀ, ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ಅವರುಗಳ ತಂಡ ಕರ್ತವ್ಯ ನಿರ್ವಹಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: 40ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿ ಇತ್ತೆ ಬರ್ಪೆ ಅಬೂಬಬಕ್ಕರ್ ಬಂಧನ : 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ Rating: 5 Reviewed By: karavali Times
Scroll to Top