ಮಂಗಳೂರು, ನವೆಂಬರ್ 26, 2025 (ಕರಾವಳಿ ಟೈಮ್ಸ್) : ಸರ್ಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಹಾಗೂ ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲಾಗಿದೆ.
ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಡಿಸೆಂಬರ್ 13 ಸಂಬಂಧ ಆದೇಶಿಸಲಾಗಿದ್ದು, ಇದು ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಬಾಕಿ ಇರುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದುದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಮೇಲೆ ಕಾಣಿಸಿದ ಪ್ರಕರಣಗಳಿಗೆ ಶೇ. 50 ರಿಯಾಯಿತಿಯಲ್ಲಿ ದಂಡ ಪಾವತಿಸುವ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














0 comments:
Post a Comment