ಕಡಬ, ನವೆಂಬರ್ 26, 2025 (ಕರಾವಳಿ ಟೈಮ್ಸ್) : ಪತ್ನಿಯೊಂದಿಗೆ ಗೆಳೆಯನೊಬ್ಬ ಮೊಬೈಲ್ ಸಂಪರ್ಕದಲ್ಲಿದ್ದ ಎಂಬ ಕಾರಣಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬ ಸಮೀಪದ ಕುಟ್ರುಪ್ಪಾಡಿ ಎಂಬಲ್ಲಿ ನ 26 ರಂದು ಸಂಭವಿಸಿದೆ.
ಮೃತ ಯುವಕನನ್ನು ಇಲ್ಲಿನ ನಿವಾಸಿ ರಾಕೇಶ್ (36) ಎಂದು ಹೆಸರಿಸಲಾಗಿದೆ. ಈತ ಕಡಬದ ಕಳಾರದಲ್ಲಿ ದ್ವಿಚಕ್ರ ಗ್ಯಾರೇಜ್ ಇಟ್ಟುಕೊಂಡಿದ್ದು, ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್ ಪೆÇೀನ್ ಮೂಲಕ ಸಂಪರ್ಕದಲ್ಲಿರುವ ವಿಷಯ ತಿಳಿದ ರಾಕೇಶ್ ತೀವ್ರವಾಗಿ ಬೇಸರಗೊಂಡು ನ 19 ರಂದು ಸಂಜೆ ಕಡಬ ಬಜಾಜ್ ಶೋ ರೂಂ ಹಿಂದುಗಡೆ ಅಮಲು ಪದಾರ್ಥದೊಂದಿಗೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದಾನೆ. ತಕ್ಷಣ ಅಲ್ಲಿದ್ದವರು ರಾಕೇಶ್ ನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ 26 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.














0 comments:
Post a Comment