ಉಪ್ಪಿನಂಗಡಿ, ನವೆಂಬರ್ 13, 2025 (ಕರಾವಳಿ ಟೈಮ್ಸ್) : ಠಾಣಾ ವ್ಯಾಪ್ತಿಯಲ್ಲಿ ಕೀಟ ನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಾಲಕಿಗೆ ಕಡಬದ ಯುವಕನೊಂದಿಗೆ ಸಂಪರ್ಕವಿದ್ದು, ಸಾವಿನ ಬಗ್ಗೆ ಅನುಮಾನವಿದೆ ಎಂದು ಬಾಲಕಿಯ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯ ನಿವಾಸಿ, ಸ್ಥಳೀಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ನ 4 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಮನೆಯಲ್ಲಿದ್ದವಳು, ಮನೆಯಲ್ಲಿ ತಂದಿಟ್ಟಿದ್ದ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ಕೂಲಿ ಕೆಲಸಕ್ಕೆ ಹೋಗಿದ್ದ ಆಕೆಯ ತಾಯಿ ಮನೆಗೆ ಬಂದು, ಬಾಲಕಿಯನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಾಲಕಿ ನ 12 ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಸದ್ರಿ ಮೃತ ಬಾಲಕಿಗೆ ಕಡಬ ನಿವಾಸಿಯೊಬ್ಬನೊಂದಿಗೆ ಫೆÇೀನ್ ಸಂಪರ್ಕವಿದ್ದು, ಈ ಬಗ್ಗೆ ಮೃತ ಬಾಲಕಿಯ ಸಾವಿನ ಬಗ್ಗೆ ಅನುಮಾನವಿದೆಯೆಂದು ಆಕೆಯ ತಂದೆ ನೀಡಿದ ದೂರಿನ ಮೇರೆಗೆ, ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಯುಡಿಆರ್ ನಂಬ್ರ 56/2025 ಕಲಂ 194 (3)(4) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.















0 comments:
Post a Comment