ಬಂಟ್ವಾಳ, ನವೆಂಬರ್ 14, 2025 (ಕರಾವಳಿ ಟೈಮ್ಸ್) : ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾತನನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಕನ್ಯಾನ ನಿವಾಸಿ ಮೊಯಿದ್ದೀನ್ ಶಾಕಿರ್ ಯಾನೆ ಮೊಯಿದ ಶಾಕೀರ (7) ಎಂದು ಹೆಸರಿಸಲಾಗಿದೆ.
ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಆನಂದ (39) ಎಂಬವರಿಗೆ 2020 ರ ಸೆಪ್ಟೆಂಬರ್ 16 ರಂದು ಆರೋಪಿಗಳಾದ ಅಜೀಝ್, ತೋಯಿಬ್, ಆಶೀಪ್, ಕಲೀಲ್, ಅಜೀಝ್ ಹಾಗೂ ಇತರರು ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2020, ಕಲಂ 143, 147, 148, 341, 323, 324, 504, 506 ಜೊತೆಗೆ 149 ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಗಳ ಪೈಕಿ ಕನ್ಯಾನ ನಿವಾಸಿ ಮೊಯಿದ್ದೀನ ಶಾಕೀರ್ ಯಾನೆ ಮೊಯಿದ ಶಾಕೀರ (27) ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ವಿದೇಶಕ್ಕೆ ತೆರಳಿದ್ದ. ಈತನ ಮೇಲೆ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಜಾರಿ ಮಾಡಿತ್ತು.
ನ 13 ರಂದು ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ ಮಾಡಲಾಗಿದ್ದು, ನ 14 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು ಸೂಕ್ತ ಜಾಮೀನಿನೊಂದಿಗೆ ಬಿಡುಗಡೆ ಮಾಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.













0 comments:
Post a Comment