ಸುಖಾನಂದ ಶೆಟ್ಟಿ ಕೊಲೆ ಅರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪಿ 19 ವರ್ಷಗಳ ಬಳಿಕ ಬಂಧನ - Karavali Times ಸುಖಾನಂದ ಶೆಟ್ಟಿ ಕೊಲೆ ಅರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪಿ 19 ವರ್ಷಗಳ ಬಳಿಕ ಬಂಧನ - Karavali Times

728x90

19 November 2025

ಸುಖಾನಂದ ಶೆಟ್ಟಿ ಕೊಲೆ ಅರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪಿ 19 ವರ್ಷಗಳ ಬಳಿಕ ಬಂಧನ

 ಮಂಗಳೂರು, ನವೆಂಬರ್ 19, 2025 (ಕರಾವಳಿ ಟೈಮ್ಸ್) : 2006 ರಲ್ಲಿ ಕೊಲೆಯಾದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದಲ್ಲಿ ಸುಮಾರು 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಸಲಾಂ ಅಡ್ಡೂರು (47) ಎಂಬಾತನನ್ನು ನ 18 ರಂದು ಬಜಪೆ-ಕಿನ್ನಿಪದವು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. 

2006 ರ ಡಿಸೆಂಬರ್ 1 ರಂದು ಸುರತ್ಕಲ್ ಪೆÇಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಲಿಯಾಸ್ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೆÇಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದರು. ನಂತರ ಕಬೀರ್ ನನ್ನು ವಾಹನದಲ್ಲಿ ಕೇರಳದ ಕಾಸರಗೋಡು ಬಳಿ ಬಿಟ್ಟು ನಂತರ ತಲೆ ಮರೆಸಿಕೊಂಡಿರುವುದಾಗಿದೆ. ಸಬ್ದುಲ್ ಸಲಾಂ ಅಡ್ಡೂರು ಕೃತ್ಯ ನಡೆದ ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಆರೋಪಿಯು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 

ಮೂಲತಃ ಅಡ್ಡೂ ಗ್ರಾಮದ ಟಿಬೆಟ್ ಕಾಲೊನಿ ನಿವಾಸಿಯಾಗಿದ್ದು, ಪ್ರಸ್ತುತ ಬಜಪೆ-ಕಿನ್ನಿಪದವು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಅಬ್ದುಲ್ ಸಲಾಂ ಅಡ್ಡೂರು ಸುಮಾರು 19 ವರ್ಷಗಳಿಂದ ದಸ್ತಗಿರಿಗೆ ಸಿಗದೇ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದರಿಂದ ಸದ್ರಿ ಆರೋಪಿಯ ಬಜಪೆ ಠಾಣಾ ವ್ಯಾಪ್ತಿಯಲ್ಲಿ ಇರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ ನವೆಂಬರ್ 18 ರಂದು ಬಜಪೆ ಕಿನ್ನಿಪದವು ಬಳಿ ವಶಕ್ಕೆ ಪಡೆದು ಠಾಣೆಗೆ ಕರೆ ತರಲಾಗಿದೆ. 

ಆರೋಪಿ ಸಲಾಂ 2007ನೇ ಇಸವಿಯಲ್ಲಿ ಪಾಸ್ ಪೆÇೀರ್ಟ್ ಮಾಡಿ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ತಲೆಮರೆಸಿಕೊಂಡು ಇತ್ತೀಚಿಗೆ ವಾಪಸ್ಸು ಬಂದಿರುತ್ತಾನೆ. ಈತನು ಅಡ್ಡೂರಿನಲ್ಲಿರುವ ತನ್ನ ಮನೆಯನ್ನು ನೆಲಸಮಗೊಳಿಸಿ ಅಲ್ಲಿಂದ ಬಜಪೆಯ ಕಿನ್ನಿಪದವಿನ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುತ್ತಾನೆ. ಈತನ ಸಹೋದರ ಲತೀಫ್ ಅಲಿಯಾಸ್ ಅಡ್ಡೂರು ಲತೀಫ್ ವಿದೇಶದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈ ಪ್ರಕರಣದಲ್ಲಿ 16 ಆರೋಪಿಗಳನ್ನು ಈ ಹಿಂದೆ ಬಂದಿಸಿದ್ದು ಉಳಿದ 11 ಜನ ಆರೋಪಿಗಳು ತಲೆಮರೆಸಿಕೊಂಡಿರುತ್ತಾರೆ. 

ಬಂಧಿತ ಆರೋಪಿಯ ಮೇಲೆ ಬಜಪೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಬಜಪೆ ಪೆÇಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ತೆರೆಯಲಾಗಿದೆ. ಈತನ ಮೇಲೆ ನ್ಯಾಯಾಲಯದಿಂದ ಹಲವಾರು ಬಾರಿ ವಾರಂಟ್ ಗಳನ್ನು ಹೊರಡಿಸಿದ್ದು ಸದ್ರಿ ಆರೋಪಿಯು ಸುಮಾರು 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಈತನ ವಿರುದ್ಧ ಠಾಣೆಯಲ್ಲಿ ಕಲಂ 209 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿ ಪತ್ತೆಯ ಬಗ್ಗೆ  ಸಹಾಯಕ ಪೆÇಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀಕಾಂತ್ ಕೆ ಅವರ ಮಾರ್ಗದರ್ಶನದಲ್ಲಿ ಪೆÇಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಪಿ, ಪಿಎಸ್ಸೈ ರಘು ನಾಯಕ್ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಅಜಿತ್ ಮ್ಯಾಥ್ಯೂ, ರಾಜೇಂದ್ರ ಪ್ರಸಾದ್, ವಿನೋದ್ ನಾಯ್ಕ್, ಸುನಿಲ್ ಕುಸನಾಳ  ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಸುಖಾನಂದ ಶೆಟ್ಟಿ ಕೊಲೆ ಅರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪಿ 19 ವರ್ಷಗಳ ಬಳಿಕ ಬಂಧನ Rating: 5 Reviewed By: karavali Times
Scroll to Top