ಬಂಟ್ವಾಳ, ನವೆಂಬರ್ 26, 2025 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಗೂಡಿನಬಳಿ ಸಮುದಾಯದ ಭವನದ ಬಳಿ ನೇತ್ರಾವತಿ ನದಿಯಲ್ಲಿ ಬುಧವಾರ ಬೆಳಿಗ್ಗೆ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಸುಮಾರು 50-55 ವರ್ಷ ಪ್ರಾಯದ ಮಹಿಳೆ ಬೆಳಿಗ್ಗೆ ಸುಮಾರು 10 ಗಂಟೆ ವೇಳೆ ಪಾಣೆಮಂಗಳೂರು ಹೊಸ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿದ್ದಾರೆ ಎನ್ನಲಾಗಿದ್ದು, ಸೀರೆ ಸುತ್ತಿದ್ದರಿಂದ ಮೃತದೇಹ ಮುಳುಗದೆ ಹಳೆ ಸೇತುವೆ ಬಳಿ ಬೆಳಿಗ್ಗೆ ಸುಮಾರು 10.30 ಗಂಟೆ ವೇಳೆಗೆ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ನಿವಾಸಿಗಳಾದ ನಿಸಾರ್ ಎಂ ಕೆ, ಅಪ್ಪಿ ಎಂ ಕೆ, ಇಬ್ರಾಹಿಂ, ಹಂಝ, ಅನ್ಸಾರ್ ಹಾಗೂ ತೌಚಿ ಎಂಬವರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
















0 comments:
Post a Comment