ಮಂಗಳೂರು, ನವೆಂಬರ್ 05, 2025 (ಕರಾವಳಿ ಟೈಮ್ಸ್) : ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತತ್ ಕ್ಷಣದಲ್ಲಿ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274/- ರೂಪಾಯಿ ಸೈಬರ್ ವಂಚನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 87-2025, ಕಲಂ66(ಡಿ) ಐಟಿ ಆಕ್ಟ್ ಹಾಗೂ 318(4) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿತ್ತು.
ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ 4 ರಂದು ಆರೋಪಿ ಮೂಲತಃ ಬೆಂಗಳೂರು ಯಶವಂತಪುರ ನಿವಾಸಿ, ಪ್ರಸ್ತುತ ಬೆಂಗಳೂರು ಸುಂಕದಕಟ್ಟೆ-ಶ್ರೀನಿವಾಸನಗರ ನಿವಾಸಿ ವಾಸುದೇವ ಆರ್ (32) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೆÇೀನ್ ಗಳು ಹಾಗೂ 20,300/- ರೂಪಾಯಿ ನಗದು ಹಣ ಸಹಿತ ಒಟ್ಟು 1,60,300/- ರೂಪಾಯಿ ಮೌಲ್ಯ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.















0 comments:
Post a Comment