ಮೂಡಬಿದ್ರೆ, ನವೆಂಬರ್ 17, 2025 (ಕರಾವಳಿ ಟೈಮ್ಸ್) : ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಮೂಡಬಿದ್ರೆ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ನ 15 ರಂದು ಹೊಸ್ಮಾರು ನೆಲ್ಲಿಕಾರು ಎಂಬಲ್ಲಿ ನಡೆದಿದೆ.
ನ 15 ರಂದು ಸಂಜೆ 5 ಗಂಟೆಗೆ ದೊರೆತ ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ಫಕ್, ಅಬ್ದುಲ್ ಮೊಹಮ್ಮದ್ ನಿಶಾಮ್ ಮತ್ತು ಇತರರು ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬಂದಿದ್ದು, ಈ ಪೈಕಿ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇವರ ವಿರುದ್ದ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 178/2025 ಕಲಂ 111 ಬಿ.ಎನ್.ಎಸ್, 11(1)(ಡಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ ಮತ್ತು ಕಲಂ 4, 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪೈಕಿ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್ ಮೇಲೆ ಒಟ್ಟು 29 ಪ್ರಕರಣಗಳು ವಿವಿದ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ. ಆರೋಪಿ ಮೊಹಮ್ಮದ್ ಅಶ್ವದ್ ಮೇಲೆ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪ್ರಕರಣ ದಾಖಲಾಗಿದ್ದು, ಇದು 2ನೇ ಪ್ರಕರಣವಾಗಿದೆ ಹಾಗೂ ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ ವಿರುದ್ದ ಇದು ಮೊದಲನೇ ಪ್ರಕರಣವಾಗಿದೆ. ಆರೋಪಿಗಳ ವಿರುದ್ದ ಸಂಘಟಿತ ಅಪರಾಧ ಪ್ರಕರಣದಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂದನ ವಿಧಿಸಿದೆ.















0 comments:
Post a Comment