ಬಂಟ್ವಾಳ, ಡಿಸೆಂಬರ್ 06, 2025 (ಕರಾವಳಿ ಟೈಮ್ಸ್) : ಕೇಂದ್ರ ಸರಕಾರವು ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕ ಸಂಹಿತೆಗಳಾಗಿ ಮಾಡಿರುವುದನ್ನು ತಡೆಯಲು ಹಾಗೂ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ದಕ ಜಿಲ್ಲಾ ಸಮಿತಿ ವತಿಯಿಂದ ಬಿ ಸಿ ರೋಡು ಆಡಳಿತ ಸೌಧ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿ ತಾಲೂಕು ತಹಶೀಲ್ದಾರರ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.
ಎಐಸಿಸಿಟಿಯು ಜಿಲ್ಲಾದ್ಯಕ್ಷ ರಾಮಣ್ಣ ವಿಟ್ಲ, ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ ಇ, ಎಐಸಿಸಿಟಿಯು ಕೊಡಗು ಜಿಲ್ಲಾಧ್ಯಕ್ಷ ಮೋಹನ್ ವಿರಾಜಪೇಟೆ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು. ಸಜೇಶ್ ವಿಟ್ಲ, ಸುಲೈಮಾನ್ ಕೆಲಿಂಜ, ಸಂಜೀವ ಬೆಳ್ತಂಗಡಿ, ಅಕ್ಷರ ದಾಸೋಹ ನೌಕರರ ಸಂಘದ ಅದ್ಯಕ್ಷೆ ಜಯಶ್ರೀ ಆರ್ ಕೆ, ಕಾರ್ಯದರ್ಶಿ ವಾಣಿಶ್ರೀ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.


















0 comments:
Post a Comment