ಮಂಗಳೂರು, ಡಿಸೆಂಬರ್ 08, 2025 (ಕರಾವಳಿ ಟೈಮ್ಸ್) : ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ವಾದ ಮಂಡಿಸಿದ ಸರಕಾರಿ ಅಭಿಯೋಜಕಿ ಶ್ರೀಮತಿ ಜುಡಿತ್ ಓಲ್ಗ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಿದರು.
ಮಂಗಳೂರು ನಗರಕ್ಕೆ 2022 ರ ಜೂನ್ 14 ರಂದು ನಿಷೇಧಿತ ಮಾದಕ ದ್ರವ್ಯ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು ಸೆನ್ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಡಿಸೆಂಬರ್ 6 ರಂದು ಒರ್ವ ಸುಡಾನ್ ದೇಶದ ಪ್ರಜೆ ಸಹಿತ 5 ಆರೋಪಿಗಳಿಗೆ 12 ರಿಂದ 14 ವರ್ಷದ ತನಕ ಕಠಿಣ ಸಜೆ ಮತ್ತು ದಂಡದ ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕಿ ಶ್ರೀಮತಿ ಜುಡಿತ್ ಓಲ್ಗ ಮಾರ್ಗರೇಟ್ ಕ್ರಾಸ್ತಾ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಪೆÇಲೀಸ್ ಆಯುಕ್ತರ ಕಛೇರಿಯಲ್ಲಿ ಡಿ 8 ರಂದು ಪೆÇಲೀಸ್ ಇಲಾಖಾ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭ ಡಿಸಿಪಿ ಮಿಥುನ್, ಸೆನ್ ಪೊಲೀಸ್ ಠಾಣಾ ಎಸಿಪಿ ರವೀಶ್ ನಾಯಕ್, ಉಪಸ್ಥಿತರಿದ್ದರು.














0 comments:
Post a Comment