ಮಂಗಳೂರು, ಡಿಸೆಂಬರ್ 31, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಕ ಪಡೆ ಯೋಜನೆಯು ಅನುಷ್ಠಾನಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಕ್ಕ ಪಡೆ ಯೋಜನೆಯ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ 31 ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆಯು ಜಾರಿಗೆ ಬಂದಿದ್ದು, 5 ಮಹಿಳಾ ಗೃಹ ರಕ್ಷಕರ ತಂಡವನ್ನು ರಚಿಸಲಾಗಿ ಅವರು ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ.
ಅಕ್ಕ ಪಡೆ ಯೋಜನೆಯ ಮುಖ್ಯ ಉದ್ದೇಶ :
ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ, ಜಾಗೃತಿ ಮೂಡಿಸುತ್ತದೆ. ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯ ಮುಕ್ತ ವಾತಾವರಣ ಸೃಷ್ಟಿಸುತ್ತದೆ.
ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ‘ಅಕ್ಕ ಪಡೆ’ ತಂಡವು ಸ್ಥಳೀಯ ಪೆÇಲೀಸರ ನಿಕಟ ಸಹಯೋಗದೊಂದಿಗೆ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಎರಡು ಪಾಳಿಗಳಲ್ಲಿ ಅಂದರೆ, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಮತ್ತು ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿದೆ.
ತಂಡದ ಸದಸ್ಯರನ್ನು ಶಾಲೆ, ಕಾಲೇಜು, ಬಾಲಕಿಯರ/ ಮಹಿಳಾ ಹಾಸ್ಟೆಲ್, ಬಸ್/ ರೈಲ್ವೆ ನಿಲ್ದಾಣಗಳು, ಸ್ಥಳೀಯ ಮಾರುಕಟ್ಟೆ, ಪ್ರೇಕ್ಷಣಿಯ ಸ್ಥಳಗಳು, ಪವಿತ್ರ ಸ್ಥಳಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ.


















0 comments:
Post a Comment