ಉಪ್ಪಿನಂಗಡಿ, ಡಿಸೆಂಬರ್ 22, 2025 (ಕರಾವಳಿ ಟೈಮ್ಸ್) : ಅಂಬ್ಯುಲೆನ್ಸ್ ವಾಹನವನ್ನೇ ಕಳವುಗೈದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೊಲೀಸರು ಅಂಬ್ಯುಲೆನ್ಸ್ ಸಹಿತ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋಧನ್ (22) ಎಂದು ಗುರುತಿಸಲಾಗಿದೆ. ಅಂಬ್ಯುಲೆನ್ಸ್ ಚಾಲಕ ಕಡಬ-ಶಿರಾಡಿ ನಿವಾಸಿ ಸುರೇಶ್ (46) ಅವರು ನೋಂದಣಿ ಸಂಖ್ಯೆ ಕೆಎ19 ಸಿ7557 ಅಂಬ್ಯುಲೆನ್ಸ್ ವಾಹನದ ಚಾಲಕರಾಗಿದ್ದು, ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್ ಪೊಸ್ಟ್ ಬಳಿ ನಿಲ್ಲಿಸಿ ಲಾಕ್ ಮಾಡಿ ಮನೆಗೆ ಹೋಗುತ್ತಿರುವುದಾಗಿದೆ. ಅದೇ ರೀತಿ ಡಿ 19 ರಂದು ರಾತ್ರಿ ಕೂಡಾ ಗುಂಡ್ಯ ಚೆಕ್ ಪೊಸ್ಟ್ ಬಳಿ ನಿಲ್ಲಿಸಿ ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ ಬದಲಿ ಚಾಲಕರ ಅನುಕೂಲತೆಗಾಗಿ ಅಂಬ್ಯುಲೆನ್ಸ್ ಕೀಯನ್ನು ಅದೇ ಅಂಬ್ಯುಲೆನ್ಸ್ ವಾಹನದಲ್ಲೇ ಇಟ್ಟು ಹೋಗಿರುತ್ತಾರೆ. ಮರುದಿನ ಅಂದರೆ ಡಿ 20 ರಂದು ಬೆಳಿಗ್ಗೆ ಮನೆಯಿಂದ ಬಂದು ಅಂಬ್ಯುಲೆನ್ಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ, ಅಂಬ್ಯುಲೆನ್ಸ್ ಕಳವಾಗಿರುತ್ತದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 117/2025 ಕಲಂ 303(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಡಿ 20 ರಂದು ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಆರೋಪಿ ಶೋದನ್ ಎಂಬಾತನನ್ನು ಹಾಸನದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಆತನನ್ನು ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ಕಳವಾಗಿದ್ದ ಅಂಬ್ಯುಲೈನ್ಸ್ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.














0 comments:
Post a Comment