ಮಂಗಳೂರು, ಡಿಸೆಂಬರ್ 10, 2025 (ಕರಾವಳಿ ಟೈಮ್ಸ್) : ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.
ತರಬೇತಿಯ ಅವಧಿ ವೇಳೆ ತಿಂಗಳಿಗೆ 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ನೆಹರು ಮೈದಾನದ ಎದುರಿನ ಪಿಡಬ್ಲ್ಯೂಡಿ ಕಟ್ಟಡದ 2ನೇ ಮಹಡಿಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ (ದೂರವಾಣಿ ಸಂಖ್ಯೆ 9886068357) ಸಂಪರ್ಕಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














0 comments:
Post a Comment