ಬಂಟ್ವಾಳ, ಡಿಸೆಂಬರ್ 23, 2025 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಹಿಟ್ ಆಂಡ್ ರನ್ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಡಿ ಸೋಮವಾರ ರಾತ್ರಿ ಸಂಭವಿಸಿದೆ.
ಮೃತ ಸ್ಕೂಟರ್ ಸವಾರನನ್ನು ಉಸ್ಮಾನ್ ಆರ್ ಎಂದು ಹೆಸರಿಸಲಾಗಿದೆ. ಇವರು ಅವರು ಸ್ಕೂಟರಿನಲ್ಲಿ ಹೆದ್ದಾರಿ ದಾಟಲು ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿದ್ದ ವೇಳೆ ಅಪರಿಚಿತ ಅಟೋ ರಿಕ್ಷಾವೊಂದನ್ನು ಅದರ ಚಾಲಕ ಅತೀ ವೇಗ ಹಾಗೂ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಸ್ಕೂಟರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಅಪಘಾತದಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯರಾದ ಚಂದ್ರಹಾಸ ಹಾಗೂ ರಂಜನ್ ದಾಸ್ ಎಂಬವರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದರಾದರೂ ಉಸ್ಮಾನ್ ಅದಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತಪಡಿಸಿದ ಅಟೋ ರಿಕ್ಷಾ ಚಾಲಕ ರಿಕ್ಷಾ ನಿಲ್ಲಿಸದೆ ಗಾಯಾಳುವನ್ನು ಉಪಚರಿಸದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಚಂದ್ರಹಾಸ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment