ಮಂಗಳೂರು, ಡಿಸೆಂಬರ್ 03, 2025 (ಕರಾವಳಿ ಟೈಮ್ಸ್) : 2025-26ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ನಿನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ 25 ಸಾವಿರ ರೂಪಾಯಿ ವಿಶೇಷ ಪೆÇ್ರೀತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುತ್ತದೆ. ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31 ಕೊನೆ ದಿನಾಂಕವಾಗಿದೆ.
ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸೈಟ್ ಅಥವಾ ಸಹಾಯವಾಣಿ ಸಂಖ್ಯೆ 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.














0 comments:
Post a Comment