ಬಂಟ್ವಾಳ, ಡಿಸೆಂಬರ್ 08, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಅಜ್ಜಿಬೆಟ್ಟು ಕ್ರಾಸ್ ಬಳಿ ಡಿ 7 ರಂದು ಸ್ಕೂಟರ್-ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಕ್ಲಿಪರ್ಡ್ ಡಿಸೋಜ ಎಂದು ಹೆಸರಿಸಲಾಗಿದೆ. ಇವರು ಚಲಾಯಿಸುತ್ತಿದ್ದ ಸ್ಕೂಟರ್ ಜನಾರ್ದನ ಎಂಬವರು ಚಲಾಯಿಸುತ್ತಿದ್ದ ಟ್ಯಾಂಕರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಹಾಗೂ ಮೈಕೈಗಳಿಗೆ ಗಾಯಗಳಾಗಿದ್ದು, ಅವರನ್ನು ತುಂಬೆ ಪಾಧರ್ ಮುಲ್ಲರ್ ಅಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿ ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment