ಡಿಸೆಂಬರ್ 3 ರಂದು (ನಾಳೆ) ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲೆಗೆ - Karavali Times ಡಿಸೆಂಬರ್ 3 ರಂದು (ನಾಳೆ) ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲೆಗೆ - Karavali Times

728x90

1 December 2025

ಡಿಸೆಂಬರ್ 3 ರಂದು (ನಾಳೆ) ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲೆಗೆ

ಮಂಗಳೂರು, ಡಿಸೆಂಬರ್ 02, 2025 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. 

ಬೆಳಿಗ್ಗೆ 11  ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ 11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ  ಶ್ರೀ ನಾರಾಯಣ ಗುರು- ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಶ್ರೀ ಗುರುವಿನ ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 

ಮಧ್ಯಾಹ್ನ 12.30ಕ್ಕೆ ಪೇಸ್, ಜ್ಞಾನ ನಗರ,  ಕೊಣಾಜೆ ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋಟ್ರ್ಸ್ ಅರೆನಾ ಇದರ ಶಿಲಾನ್ಯಾಸ  ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.15ಕ್ಕೆ ನಗರದ ಸಕ್ರ್ಯೂಟ್ ಹೌಸಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್ ಭೇಟಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ, ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಡಿಸೆಂಬರ್ 3 ರಂದು (ನಾಳೆ) ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲೆಗೆ Rating: 5 Reviewed By: karavali Times
Scroll to Top