ಬಂಟ್ವಾಳ, ಡಿಸೆಂಬರ್ 29, 2025 (ಕರಾವಳಿ ಟೈಮ್ಸ್) : ಮಂಗಳೂರು ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಿದ ಬಂಟ್ವಾಳ ಮೂಲದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಳಿ ಗ್ರಾಮದ ಕಕ್ಕೆಪದವು ನಿವಾಸಿ ಲಕ್ಷಣ್ ದಾಸ್ ಅವರ ಪುತ್ರ ರೋಹಿತ್ ಬಿ ದಾಸ್ (24) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಯಿಂದ 3.50 ಲಕ್ಷ ರೂಪಾಯಿ ಮೌಲ್ಯದ 32 ಗ್ರಾಂ ಚಿನ್ನದ ಕರಿಮಣಿ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಎಲೆಕ್ಟ್ರಿಕ್ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಡಿ 25 ರಂದು ಸಂಜೆ ಗುರುನಗರ ನಿವಾಸಿ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸಂಜೆ ಸುಮಾರು 6.30 ಗಂಟೆಗೆ ಹಿಂದಿನಿಂದ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾ ಏಕಿ ರತ್ನಾವತಿಯವರ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಬೆಲೆ ಬಾಳುವ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡು ಓಡಿ ಹೋಗಿರುತ್ತಾನೆ. ಈ ಬಗ್ಗೆ ಅದೇ ದಿನ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಕೈಗೆತ್ತಿಕೊಂಡ ಗ್ರಾಮಾಂತರ ಪೆÇಲೀಸ್ ಠಾಣೆಯ ಪೆÇಲೀಸ್ ಇನ್ಸ್ ಪೆಕ್ಟರ್ ಗವಿರಾಜ್ ಮತ್ತು ಪಿಎಸ್ಸೈ ಅರುಣ್ ಕುಮಾರ್ ಅವರ ನೇತೃತ್ವದ ಕ್ರೈಂ ಸಿಬ್ಬಂದಿಗಳು ಮತ್ತು ಎಸಿಪಿ ದಕ್ಷಿಣ ಉಪವಿಭಾಗದ ಕ್ರೈಂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಸಾಕ್ಷ್ಯಾಧಾರಗಳ ಮೇಲೆ ಡಿ 28 ರಂದು ಬೆಳಿಗ್ಗೆ ಸುಮಾರು 9.30 ಗಂಟೆಗೆ ಆರೋಪಿ ರೋಹಿತ್ ಬಿ ದಾಸ್ ಎಂಬಾತನನ್ನು ಬಂಟ್ವಾಳದ ಕುಕ್ಕೆಪದವು ಎಂಬಲ್ಲಿಂದ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ತನಿಖೆಯಲ್ಲಿ ಆರೋಪಿಯು ಸ್ವಿಗ್ಗಿ ಮತ್ತು ಝೋಮೆಟೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸ್ಕೂಟರ್ ಖರೀದಿಸಿದ್ದು, ಮತ್ತು ಇತರ ವಿಚಾರಗಳಿಗೆ ಲಕ್ಷಾಂತರ ರೂಪಾಯಿಗಳ ಸಾಲ ಮಾಡಿದ್ದು, ಸಾಲವನ್ನು ತೀರಿಸಲು ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
2025ನೇ ಸಾಲಿನಲ್ಲಿ ಮಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 7 ಸರಗಳ್ಳತನ (ಚೈನ್ ಸ್ಟಾಚಿಂಗ್) ಪ್ರಕರಣಗಳು ವರದಿಯಾಗಿದ್ದು, ಎಲ್ಲಾ 7 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.










0 comments:
Post a Comment