ಮಂಗಳೂರು, ಡಿಸೆಂಬರ್ 05, 2025 (ಕರಾವಳಿ ಟೈಮ್ಸ್) : ಮುಲ್ಕಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಜಿಟಲ್ ಅರೆಸ್ಟಿಗೆ ಒಳಗಾಗಿದ್ದ ವೃದ್ದ ದಂಪತಿಯನ್ನು ಮುಲ್ಕಿ ಪೊಲೀಸರು ಹಾಗೂ ಕಿನ್ನಿಗೋಳಿ ಬ್ಯಾಂಕ್ ಮ್ಯಾನೇಜರ್ ಅವರ ಜಂಟಿ ಕಾರ್ಯಾಚರಣೆ ಸಕಾಲದಲ್ಲಿ ರಕ್ಷಣೆ ನೀಡಿ ಬೃಹತ್ ಮೊತ್ತದ ಹಣಕಾಸು ಕಳೆದುಕೊಳ್ಳುವುದರಿಂದ ಸ್ವಲ್ಪದರಲ್ಲೇ ಪಾರು ಮಾಡಿದ ಘಟನೆ ಡಿ 1 ರಂದು ನಡೆದಿದೆ.
ಇಲ್ಲಿನ ದಾಮಸಕಟ್ಟೆ ನಿವಾಸಿಗಳಾದ ಬೆನಡಿಕ್ಟ್ ಪೆರ್ನಾಂಡಿಸ್ (84) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71) ಅವರು ಡಿಸೆಂಬರ್ 1 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೆÇಲೀಸ್ ಎಂಬ ಸೊಗಿನಲ್ಲಿ ಮೊಬೈಲ್ ಫೆÇೀನ್ ವಾಟ್ಸಪ್ ಮೂಲಕ ಸಂಪರ್ಕಿಸಿ, ಅವರುಗಳು 6 ಕೋಟಿ ಮೋಸ ಮಾಡಿದ್ದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟಿಗೆ ಒಳಪಡಿಸಿ, ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಯಿಸುವಂತೆ ಸೂಚಿಸಿದ ಮೇರೆಗೆ ವೃದ್ದ ದಂಪತಿಗಳು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಬಾಬ್ತು ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ಹೋಗಿದ್ದರು. ಈ ಸಂದರ್ಭ ಕಿನ್ನಿಗೋಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಯಾಕೆ ವರ್ಗಾವಣೆ ಮಾಡುತ್ತೀರಿ ಎಂದು ವಿಚಾರಿಸಿದಾಗ ವೃದ್ದ ದಂಪತಿಗಳು ಸರಿಯಾದ ಉತ್ತರ ನೀಡದ ಕಾರಣ ಸಂಶಯಗೊಂಡು, ಸೈಬರ್ ವಂಚಕರು ಒದಗಿಸಿದಂತಹ ಖಾತೆಗೆ ಹಣವನ್ನು ವರ್ಗಾವಣೆ ಮಾಡದ ಬ್ಯಾಂಕ್ ಮ್ಯಾನೇಜರ್ ಅವರು ಕಿನ್ನಿಗೋಳಿ ಪರಿಸರದ ಬೀಟ್ ಪೊಲೀಸ್ ಎಚ್ ಸಿ ಯಶವಂತ ಕುಮಾರ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಎಚ್ ಸಿ ಕಿಶೋರ ಅವರಿಗೆ ದೂರವಾಣಿ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾದ ಮುಲ್ಕಿ ಪೆÇಲೀಸರು ವೃದ್ದ ದಂಪತಿಗಳ ಮನೆಗೆ ತೆರಳಿ ಅವರ ಮೊಬೈಲ್ ಪರಿಶೀಲನೆ ನಡೆಸಿದಾಗ ವೃದ್ದ ದಂಪತಿ ವಂಚಕರ ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿರುವುದು ತಿಳಿದು ಬಂದಿದೆ. ಕೂಡಲೇ ಪೆÇಲೀಸ್ ಸಿಬ್ಬಂದಿಗಳು ಬ್ಯಾಂಕ್ ಮ್ಯಾನೇಜರ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿ ಹಣ ವರ್ಗಾವಣೆ ಮಾಡದಂತೆ ಸೂಚಿಸಿದ್ದಾರೆ. ವೃದ್ದ ದಂಪತಿಗಳಿಗೆ ತಿಳುವಳಿಕೆ ನೀಡಿ, ವೃದ್ದ ದಂಪತಿಗಳ ಹಣವನ್ನು ಉಳಿಸಿರುತ್ತಾರೆ. ಇದರ ಬಗ್ಗೆ ಮುಲ್ಕಿ ಪೆÇಲೀಸ್ ಠಾಣೆಯವರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿರುತ್ತಾರೆ ಎಂದು ಮಂಗಳೂರು ನಗರ ಪೆÇಲೀಸ್ ಆಯುಕ್ತರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.














0 comments:
Post a Comment