ಮಂಗಳೂರು, ಡಿಸೆಂಬರ್ 02, 2025 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು. 11.40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಗಳೊಂದಿಗೆ ಪೇಸ್ ಜ್ಞಾನ ನಗರ, ಜ್ಞಾನ ನಗರ ಕೊಣಾಜೆ ಮಂಗಳೂರು ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋಟ್ರ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.15ಕ್ಕೆ ಮುಖ್ಯಮಂತ್ರಿಗಳೊಂದಿಗೆ ನಗರದ ಸಕ್ರ್ಯೂಟ್ ಹೌಸಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್ ಭೇಟಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.














0 comments:
Post a Comment