ಮಂಗಳೂರು, ಡಿಸೆಂಬರ್ 19, 2025 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ ರೇವಣ್ಣ ಅವರು ಡಿಸೆಂಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ರೇವಣ್ಣ ಅವರು 11.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಗಾರ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 5.50ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.














0 comments:
Post a Comment