ಬಂಟ್ವಾಳ, ಡಿಸೆಂಬರ್ 25, 2025 (ಕರಾವಳಿ ಟೈಮ್ಸ್) : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಹಿರಿಯ ರಾಜಕಾರಣಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ ಎಚ್ ಖಾದರ್ ಅವರನ್ನು ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವತಿಯಿಂದ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ನೇತೃತ್ವದಲ್ಲಿ ಡಿ 24 ರಂದು ಸ್ವ ನಿವಾಸದಲ್ಲಿ ಸನ್ಮಾನಿಸಲಾಯಿತು.
ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಸನ್ಮಾನಿತರ ಪರಿಚಯಿಸಿದರು. ಸನ್ಮಾನ ಸ್ವೀಕರಿಸಿ ಹಾಜಿ ಬಿ ಎಚ್ ಖಾದರ್ ಅನಿಸಿಕೆ ವ್ಯಕ್ತಪಡಿಸಿದರು. ಜಮೀಯ್ಯತುಲ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಶುಭ ಹಾರೈಸಿದರು. ಸಂಸ್ಥೆಯ ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ಹಕೀಂ ಕಲಾಯಿ ವಂದಿಸಿದರು.



















0 comments:
Post a Comment