ಮಂಗಳೂರು, ಡಿಸೆಂಬರ್ 05, 2025 (ಕರಾವಳಿ ಟೈಮ್ಸ್) : ಸರ್ಕಾರಿ ಪದವಿಪೂರ್ವ ಕಾಲೇಜು ಹಂಪನಕಟ್ಟೆಯಲ್ಲಿ 5.50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿಯನ್ನು ಶಾಸಕ ಡಿ ವೇದವ್ಯಾಸ ಕಾಮತ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, 2025-26ನೇ ಸಾಲಿನಿಂದ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಪ್ರಾರಂಭಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯವಿರುವ ಅನೇಕ ವಿಷಯಗಳ ಬಗ್ಗೆ ಕಾಲೇಜಿನವರು ನನ್ನ ಬಳಿ ಮನವಿ ಮಾಡಿದ್ದರು. ಅದರಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು ಬಳಸಿಕೊಂಡು ಕಂಪ್ಯೂಟರ್ ಹಾಗೂ ಸುಸಜ್ಜಿತ ಪ್ರಯೋಗಾಲಯವನ್ನು ನಿರ್ಮಿಸಿ ಇದೀಗ ಲೋಕಾರ್ಪಣೆಗೊಳಿಸಲಾಗಿದೆ. ಈ ವೇಳೆ ನಮ್ಮ ಮನವಿಗೆ ಸ್ಪಂದಿಸಿ ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಿರುವ ಯೂನಿಫೈ ಸಿ.ಎಕ್ಸ್ (ದಿಯಾ ಸಿಸ್ಟಮ್ಸ್) ಮಂಗಳೂರು ಇವರಿಗೂ ನನ್ನ ವಿಶೇಷ ಧನ್ಯವಾದಗಳು. ವಿದ್ಯಾರ್ಥಿಗಳು ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವಂತಾದರೆ ನಮ್ಮೆಲ್ಲರ ಶ್ರಮ ಸಾರ್ಥಕ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪ ನಿರ್ದೇಶಕಿ ರಾಜೇಶ್ವರಿ ಎಚ್.ಎಚ್, ಕಾಲೇಜು ಪ್ರಾಂಶುಪಾಲ ವಿನ್ಸೆಂಟ್ ಆಂಟನಿ ಮಸ್ಕರೇನಸ್ ಮೊದಲಾದವರು ಭಾಗವಹಿಸಿದ್ದರು.















0 comments:
Post a Comment