ಮಂಗಳೂರು, ಡಿಸೆಂಬರ್ 24, 2025 (ಕರಾವಳಿ ಟೈಮ್ಸ್) : ಕರಾವಳಿ ಅಭಿವೃದ್ಧಿ ಮಂಡಳಿ ವತಿಯಿಂದ ಮೀನುಗಳ ಸಂರಕ್ಷಿತ ಸರಬರಾಜಿಗೆ ಅನುಕೂಲವಾಗುವಂತಹ ಐಸ್ ಬಾಕ್ಸ್‍ಗಳನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮಕ್ಕೆ ನೀಡಲಾಯಿತು.
ಮಂಡಳಿ ಅಧ್ಯಕ್ಷ ಎಂ ಎ ಗಫೂರ್ ಅವರು ಮೀನುಗಾರಿಕೆ ನಿಗಮದ ಪ್ರಧಾನ ವ್ಯವಸ್ಥಾಪಕ ಮಹೇಶ್ ಕುಮಾರ್ ಅವರಿಗೆ ಐಸ್ ಬಾಕ್ಸ್‍ಗಳನ್ನು ಹಸ್ತಾಂತರಿಸಿದರು.
ಮೀನುಗಳ ಸಾಗಣೆ ಹಾಗೂ ಸಂರಕ್ಷಣೆಗೆ ಐಸ್ ಬಾಕ್ಸ್ ಗಳ ಅಗತ್ಯವಿರುವುದಾಗಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದಿಂದ ಬಂದ ಮನವಿಯ ಹಿನ್ನೆಲೆಯಲ್ಲಿ, ಸಾರ್ವಜನಿಕ ಹಿತದೃಷ್ಟಿಯಿಂದ ಈ ಐಸ್ ಬಾಕ್ಸ್ ಗಳನ್ನು ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.
ಈ ಸಂದರ್ಭ ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್ ಆರ್ ಶೆಟ್ಟಿ ಮತ್ತು ಮಂಡಳಿಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.



















0 comments:
Post a Comment