ಮಂಗಳೂರು, ಡಿಸೆಂಬರ್ 17, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ ಪ್ರದೇಶದಲ್ಲಿ ಸುಮಾರು 80 ಆನೆಗಳು ಸಂಚರಿಸುತ್ತಿದ್ದು, ಬೆಳೆ ಹಾನಿ ಸಂಭವಿಸುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಸತಿ ಪ್ರದೇಶಗಳ ಬಳಿ ಆನೆ ಬಂದಾಗ ನಿಗಾ ವಹಿಸಿ, ಕೂಡಲೇ ಅವುಗಳನ್ನು ಕಾಡಿಗೆ ಮರಳಿಸಲು ಮತ್ತು ಜೀವಹಾನಿ ಆಗದಂತೆ ಎಚ್ಚರ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ.
17 December 2025
- Blogger Comments
- Facebook Comments
Subscribe to:
Post Comments (Atom)














0 comments:
Post a Comment