ಧರ್ಮಸ್ಥಳ, ಡಿಸೆಂಬರ್ 23, 2025 (ಕರಾವಳಿ ಟೈಮ್ಸ್) : ಕಾನೂನು ಬಾಹಿರವಾಗಿ ಅಕ್ರಮ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ರವಿ ಬಿ ಎಸ್ ಅವರ ನೇತೃತ್ವದ ಪೊಲೀಸರು 13ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬಂಧಿತ ಆರೋಪಿಗಳನ್ನು ರಾಧಕೃಷ್ಣ (38), ವಚನ್ ಅಜಿಕುರಿ, ಅವಿನಾಶ್ ಶೆಟ್ಟಿ, ನಿಧೀಶ್ (30), ಅನ್ವರ್ (43), ಮಹಮ್ಮದ್ ಶಫೀಕ್ (38), ಇಬ್ರಾಹಿಂ (40), ಪರಮೇಶ್ (57), ಶರೀಫ್ (38), ಉಬೈದುಲ್ಲಾ (43), ಪರಮೇಶ್ವರಪ್ಪ (56), ಅಶೋಕ್ (48), ಗಾಡ್ವಿನ್ ಗೋವಿಯಸ್ (60) ಎಂದು ಹೆಸರಿಸಲಾಗಿದೆ.
ಡಿ 22 ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ಎಂಬಲ್ಲಿ ಅವಿನಾಶ್ ಶೆಟ್ಟಿ ಎಂಬವರಿಗೆ ಸೇರಿದ ಅರ್ಕ ಕನ್ವೆನ್ಸನ್ ಹಾಲಿನಲ್ಲಿ ಹಲವು ಜನರು ಸೇರಿಕೊಂಡು ಜೋರಾಗಿ ಬೊಬ್ಬೆ ಹೊಡೆದು ಅಸುಪಾಸಿನವರಿಗೆ ತೊಂದರೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ. ದಾಳಿ ವೇಳೆ ಹಾಲ್ ನ ಮೊದಲನೇ ಮಹಡಿಯಲ್ಲಿರುವ ಪಾರ್ಟಿ ಹಾಲ್ ನಲ್ಲಿ ಹಲವು ಜನರು ಸಂಘಟಿತರಾಗಿ ಅಕ್ರಮವಾಗಿ ಹಣಗಳಿಸುವ ಉದ್ದೇಶದಿಂದ, ಕಾನೂನು ಬಾಹಿರವಾಗಿ ಅಂದರ್ ಬಾಹರ್ ಎಂಬ ಇಸ್ಪೀಟ್ ಆಟವನ್ನಾಡುತ್ತಿರುವುದು ಕಂಡುಬಂದಿದೆ.
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಕೃತ್ಯಕ್ಕೆ ಬಳಸುತ್ತಿದ್ದ ಇಸ್ಪಿಟ್ ಎಲೆಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 81/2025 ಕಲಂ 79, 80 ಕೆಪಿ ಆಕ್ಟ್ ಹಾಗೂ ಕಲಂ 112 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ.














0 comments:
Post a Comment