ಕಡಬ, ಡಿಸೆಂಬರ್ 05, 2025 (ಕರಾವಳಿ ಟೈಮ್ಸ್) : ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಮನೆ ಮಂದಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕಡಬ ಗ್ರಾಮದ ಕೊಯಿಲ ಎಂಬಲ್ಲಿ ಡಿಸೆಂಬರ್ 3 ರಂದು ತಡರಾತ್ರಿ ವೇಳೆ ನಡೆದಿದೆ.
ಇಲ್ಲಿನ ನಿವಾಸಿ ಹರೀಶ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಅವರ ಸಹೋದರ ಬಾಬುಗೌಡ ಅವರು ಪೊಲೀಸರಿಗೆ ದೂರು ನೀಡಿದ್ದು, ಡಿ 3 ರ ತಡ ರಾತ್ರಿ ನೆರಮನೆಯ ಸಹೋದರನ ಮನೆಯಲ್ಲಿ ಜೋರಾಗಿ ಶಬ್ದ ಕೇಳಿದ್ದು, ಹೋಗಿ ನೋಡಿದಾಗ, ತಮ್ಮನ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಮನೆಯ ಸದಸ್ಯರುಗಳು ಹಿಡಿದುಕೊಂಡಿದ್ದು, ಸದ್ರಿ ಅಪರಿಚಿತನು ತಪ್ಪಿಸಿಕೊಳ್ಳುವ ಉದ್ದೇಶದಿಂದ, ಮನೆಯ ಸದಸ್ಯರ ಪೈಕಿ ಚೇತನ್ ಎಂಬಾತನ ಮೇಲೆ ಕೈಯಿಂದ ಹಲ್ಲೆ ಮಾಡಿರುತ್ತಾನೆ. ಅಪರಿಚಿತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿಯು ಕಡಬ ಪೆÇಲೀಸ್ ಠಾಣೆಯ ಎಚ್.ಸಿ ರಾಜು ನಾಯ್ಕ ಎಂಬುದಾಗಿ ತಿಳಿದು ಬಂದಿದೆ.
ಸದ್ರಿ ರಾಜು ನಾಯ್ಕ ತಡರಾತ್ರಿ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸದ್ರಿ ಎಚ್.ಸಿ ರಾಜು ನಾಯ್ಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತನನ್ನು ತಕ್ಷಣದಿಂದ ಕರ್ತವ್ಯದಿಂದ ಅಮಾನತುಗೊಳಿಸಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.














0 comments:
Post a Comment