ಕರಾವಳಿ ಉತ್ಸವ : ಕಲಾ ತಂಡಗಳಿಂದ ಅರ್ಜಿ ಆಹ್ವಾನ, ಡಿಸೆಂಬರ್ 15 ಕೊನೆ ದಿನ - Karavali Times ಕರಾವಳಿ ಉತ್ಸವ : ಕಲಾ ತಂಡಗಳಿಂದ ಅರ್ಜಿ ಆಹ್ವಾನ, ಡಿಸೆಂಬರ್ 15 ಕೊನೆ ದಿನ - Karavali Times

728x90

8 December 2025

ಕರಾವಳಿ ಉತ್ಸವ : ಕಲಾ ತಂಡಗಳಿಂದ ಅರ್ಜಿ ಆಹ್ವಾನ, ಡಿಸೆಂಬರ್ 15 ಕೊನೆ ದಿನ

ಮಂಗಳೂರು, ಡಿಸೆಂಬರ್ 08, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುತ್ತಿದ್ದು, ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾ ಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆÀ ಅರ್ಜಿಯನ್ನು ನಗರದ ಉರ್ವಸ್ಟೋರ್ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಡಿಸೆಂಬರ್ 12ರೊಳಗೆ ಸಲ್ಲಿಸಬೇಕು.

ಸಾಂಸ್ಕøತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ ಕಲೆ ಮತ್ತು ಸಂಸ್ಕøತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಕÀರಾವಳಿ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕøತಿಕ ಸಮಿತಿಯಿಂದ ಆಯ್ಕೆಯಾದ ಕಲಾ ತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿ ಉತ್ಸವ : ಕಲಾ ತಂಡಗಳಿಂದ ಅರ್ಜಿ ಆಹ್ವಾನ, ಡಿಸೆಂಬರ್ 15 ಕೊನೆ ದಿನ Rating: 5 Reviewed By: karavali Times
Scroll to Top