ಡಿಸೆಂಬರ್ 20 ರಿಂದ ಮಂಗಳೂರಿನಲ್ಲಿ ಕರಾವಳಿ ಉತ್ಸವ ಆರಂಭ, 6 ಬೀಚಿಗಳಲ್ಲಿ ವಿವಿಧ ಕಾರ್ಯಕ್ರಮಗಳು : ಜಿಲ್ಲಾಧಿಕಾರಿ ದರ್ಶನ್ - Karavali Times ಡಿಸೆಂಬರ್ 20 ರಿಂದ ಮಂಗಳೂರಿನಲ್ಲಿ ಕರಾವಳಿ ಉತ್ಸವ ಆರಂಭ, 6 ಬೀಚಿಗಳಲ್ಲಿ ವಿವಿಧ ಕಾರ್ಯಕ್ರಮಗಳು : ಜಿಲ್ಲಾಧಿಕಾರಿ ದರ್ಶನ್ - Karavali Times

728x90

16 December 2025

ಡಿಸೆಂಬರ್ 20 ರಿಂದ ಮಂಗಳೂರಿನಲ್ಲಿ ಕರಾವಳಿ ಉತ್ಸವ ಆರಂಭ, 6 ಬೀಚಿಗಳಲ್ಲಿ ವಿವಿಧ ಕಾರ್ಯಕ್ರಮಗಳು : ಜಿಲ್ಲಾಧಿಕಾರಿ ದರ್ಶನ್

ಮಂಗಳೂರು, ಡಿಸೆಂಬರ್ 16, 2025 (ಕರಾವಳಿ ಟೈಮ್ಸ್) : ಪ್ರಸಕ್ತ ವರ್ಷದ ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕøತಿಕ ಮತ್ತು  ಸಾಹಸಮಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು  ಜಿಲ್ಲಾಧಿಕಾರಿ ದರ್ಶನ್ ಎಚ್ ವಿ  ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಡಲ ತೀರಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು 6 ಬೀಚ್‍ಗಳಲ್ಲಿ ಕರಾವಳಿ ಉತ್ಸವದ ಅಂಗವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಪಣಂಬೂರು, ಉಳ್ಳಾಲ, ಸೋಮೇಶ್ವರ, ಸಸಿಹಿತ್ಲು, ತಣ್ಣೀರುಬಾವಿ ಮತ್ತು ಬ್ಲೂ ಫ್ಲಾಗ್ ಬೀಚ್ ಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ ಎಂದರು. 

ಸಸಿಹಿತ್ಲು ಬೀಚಿನಲ್ಲಿ ಸಾಹಸ ಕ್ರೀಡೆಗಳು, ತಣ್ಣೀರುಬಾವಿ ಬ್ಲೂ ಫ್ಲಾಗ್ ಬೀಚಿನಲ್ಲಿ ವೈನ್ ಚೀಸ್ ಕೇಕ್ ಫೆಸ್ಟ್, ತಣ್ಣೀರುಬಾವಿ ಬೀಚಿನಲ್ಲಿ ಮ್ಯೂಸಿಕ್ ಫೆಸ್ಟಿವಲ್ ಮತ್ತು ಟ್ರಯತ್ಲಾನ್, ಉಳ್ಳಾಲ ಬೀಚಿನಲ್ಲಿ ಫುಟ್ಬಾಲ್, ವಾಲಿಬಾಲ್, ಮತ್ತಿತರ ಕ್ರೀಡೆಗಳು, ಪಣಂಬೂರ್ ಬೀಚಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮ, ಸೋಮೇಶ್ವರ ಬೀಚಿನಲ್ಲಿ ಸಂಗೀತ ಸಂಜೆ ಮತ್ತು ಯೋಗ ಕಾರ್ಯಕ್ರಮಗಳು ನಡೆಯಲಿದೆ ಎಂದ ಡೀಸಿ ಸಾರ್ವಜನಿಕರಿಗೆ ಆಕರ್ಷಿಸುವ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಅದಲ್ಲದೆ ಎಲ್ಲಾ ಬೀಚ್‍ಗಳಲ್ಲಿ ಆಹಾರ ಉತ್ಸವಗಳು ನಡೆಯಲಿದ್ದು, ವೈವಿಧ್ಯಮಯ ತಿಂಡಿ ತಿನಿಸುಗಳ ಮೇಳ ನಡೆಯಲಿದೆ ಎಂದರು. 

ಕದ್ರಿ ಪಾರ್ಕಿನಲ್ಲಿ ಕಲಾ ಪರ್ಬ ಕಾರ್ಯಕ್ರಮ, ಫಲಪುಷ್ಪ ಪ್ರದರ್ಶನ ನಡೆಯಲಿದೆ. ಮಂಗಳೂರು ನಗರದಲ್ಲಿ ಚಲನಚಿತ್ರ ಉತ್ಸವ ನಡೆಯಲಿದೆ ಎಂದ ಜಿಲ್ಲಾಧಿಕಾರಿಗಳು ಡಿಸೆಂಬರ್ 27 ಮತ್ತು 28 ರಂದು ನೆಹರು ಮೈದಾನದ ಫುಟ್ಬಾಲ್ ಕ್ರೀಡಾಂಗಣದಲ್ಲಿ ಫುಟ್ಬಾಲ್ ಕ್ರೀಡಾ ಸ್ಪರ್ಧೆ ನಡೆಯಲಿದೆ. ಪಿಳಿಕುಳ ಉದ್ಯಾನವನದಲ್ಲಿಯೂ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರನ್ನು ಆಕರ್ಷಿಸಲು ಹೆಲಿಕಾಪ್ಟರ್ ಸಂಚಾರ ಕೂಡ ಆಯೋಜಿಸಲಾಗಿದೆ ಎಂದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಉಪ ಪೆÇಲೀಸ್ ಆಯುಕ್ತ ಮಿಥುನ್ ಎಚ್.ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಡಿಸೆಂಬರ್ 20 ರಿಂದ ಮಂಗಳೂರಿನಲ್ಲಿ ಕರಾವಳಿ ಉತ್ಸವ ಆರಂಭ, 6 ಬೀಚಿಗಳಲ್ಲಿ ವಿವಿಧ ಕಾರ್ಯಕ್ರಮಗಳು : ಜಿಲ್ಲಾಧಿಕಾರಿ ದರ್ಶನ್ Rating: 5 Reviewed By: karavali Times
Scroll to Top